- Advertisement -
- Advertisement -
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಉಪ ವಿಭಾಗದ ನೂತನ ಡಿವೈಎಸ್ಪಿ ಆಗಿ ಪ್ರತಾಪ್ ಸಿಂಗ್ ತೋರಾಟ್ ಆಯ್ಕೆಯಾಗಿದ್ದಾರೆ ಎಂದು ಕರ್ನಾಟಕ ಸರ್ಕಾರ ಪೊಲೀಸ್ ಇಲಾಖೆಯು ಸುತ್ತೋಲೆಯನ್ನು ಹೊರಡಿಸಿದೆ.
ಮಹಾನಿರ್ದೇಶಕರು ಮತ್ತು ಆರಕ್ಷಕ ಮಹಾನಿರೀಕ್ಷಕರ ಪರವಾಗಿ ಪ್ರಕಟಣೆಯಲ್ಲಿ ಐಪಿಎಸ್ ಅಧಿಕಾರಿ ಎಂ.ಎ.ಸಲೀಂ ಅವರು, ಕರ್ನಾಟಕ ರಾಜ್ಯ ಪೋಲಿಸ್ ಇಲಾಖೆಯು 46 ಜಿಲ್ಲೆಗಳ ಘಟಕಾಧಿಕಾರಿಗಳು ಹಾಗೂ ಅಧಿಕಾರಿಗಳನ್ನು ಕರ್ತವ್ಯದಿಂದ ಬಿಡುಗಡೆಗೊಳಿಸಿ, ಯಾವುದೇ ಸೇರುವಿಕೆ ಕಾಲವನ್ನು ಉಪಯೋಗಿಸಿಕೊಳ್ಳದೆ ವರ್ಗಾಯಿಸಲಾದ ಸ್ಥಳದಲ್ಲಿ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳುವಂತೆ ಸೂಚಿಸುವುದು, ಸದರಿ ಅಧಿಕಾರಿಗಳು ಬಿಡುಗಡೆಗೊಂಡ ಮತ್ತು ವರದಿ ಮಾಡಿದ ಬಗ್ಗೆ ಕಛೇರಿಗೆ ಪಾಲನಾ ವರದಿ ಸಲ್ಲಿಸಲು ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
- Advertisement -