Monday, June 15, 2026
Homeಕರಾವಳಿಮಂಗಳೂರುಬಂಟ್ವಾಳ: ಮನೆಯಲ್ಲಿ ಅಸ್ವಸ್ಥಗೊಂಡು ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ

ಬಂಟ್ವಾಳ: ಮನೆಯಲ್ಲಿ ಅಸ್ವಸ್ಥಗೊಂಡು ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿಯ ಜೀವ ಉಳಿಸಿದ ನೈಟ್ ಬೀಟ್ ಸಿಬ್ಬಂದಿ

- Advertisement -
- Advertisement -

ಬಂಟ್ವಾಳ: ಮನೆಯಲ್ಲಿ ಅಸ್ವಸ್ಥಗೊಂಡು ಅಸಹಾಯಕ ಸ್ಥಿತಿಯಲ್ಲಿದ್ದ ವ್ಯಕ್ತಿಯನ್ನು ರಕ್ಷಿಸಿ ನೈಟ್ ಬೀಟ್ ಸಿಬ್ಬಂದಿ ಜೀವ ಉಳಿಸಿದ ಘಟನೆ ಬಿ.ಸಿ.ರೋಡ್ ಬಳಿಯ ಗೂಡಿನಬೈಲ್‌ನಲ್ಲಿ ನಡೆದಿದೆ.

ಗೂಡಿನಬೈಲ್‌ ನಿವಾಸಿ ಅಶ್ರಫ್ ಅವರಿಗೆ ತಡರಾತ್ರಿ ಅಶ್ರಫ್‌ಗೆ ತೀವ್ರ ಎದೆ ನೋವು ಮತ್ತು ಹೊಟ್ಟೆ ನೋವು ಕಾಣಿಸಿಕೊಂಡಿತು. ಪರಿಸ್ಥಿತಿ ಗಂಭೀರವಾಗುತ್ತಿದ್ದಂತೆ, ಕುಟುಂಬ ಸದಸ್ಯರು ಸಹಾಯಕ್ಕಾಗಿ ಕೂಗಿದ್ದಾರೆ. ಸಹಾಯಕ್ಕಾಗಿ ಕೂಗುತ್ತಿದ್ದ ಶಬ್ದ ರಾತ್ರಿ ಗಸ್ತು ತಂಡದ ಕೇಳಿಸಿದೆ. ಕೂಡಲೇ ಸ್ಥಳಕ್ಕೆ ಧಾವಿಸಿದ್ದಾರೆ. ಅಶ್ರಫ್ ಅವರಿಗೆ ಸಣ್ಣ ಹೃದಯಾಘಾತವಾಗಿತ್ತು. ಬೀಟ್ ಸಿಬ್ಬಂದಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲು ನೆರವಾಗಿದ್ದಾರೆ.

ಬಂಟ್ವಾಳ ಪಟ್ಟಣ ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್ ವಿನೋದ್ ಮತ್ತು ಗೃಹರಕ್ಷಕ ದಳದ ಸಿಬ್ಬಂದಿ ಜಯಗಣೇಶ್ ಅವರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

- Advertisement -

Latest News

error: Content is protected !!