Friday, June 5, 2026
Homeಕರಾವಳಿಬಂಟ್ವಾಳ: ಪುಂಜೋಳಿಮಾರುಗುತ್ತು-ಪಡ್ಡೆಮಜಲು ಕಾಂಕ್ರೀಟ್ ರಸ್ತೆಯನ್ನು ಲೋಕಾರ್ಪಣೆಗೊಳಿಸಿದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು

ಬಂಟ್ವಾಳ: ಪುಂಜೋಳಿಮಾರುಗುತ್ತು-ಪಡ್ಡೆಮಜಲು ಕಾಂಕ್ರೀಟ್ ರಸ್ತೆಯನ್ನು ಲೋಕಾರ್ಪಣೆಗೊಳಿಸಿದ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು

- Advertisement -
- Advertisement -

ಬಂಟ್ವಾಳ: ಗೋಳ್ತಮಜಲು ಗ್ರಾ.ಪಂ.ವ್ಯಾಪ್ತಿಯ ಅಮ್ಟೂರು ಗ್ರಾಮದದಲ್ಲಿ 25 ಲಕ್ಷ ರೂ.ವೆಚ್ಚದಲ್ಲಿ ನಿರ್ಮಾಣಗೊಂಡ ಪುಂಜೋಳಿಮಾರುಗುತ್ತು-ಪಡ್ಡೆಮಜಲು ಕಾಂಕ್ರೀಟ್ ರಸ್ತೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಸೋಮವಾರ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಶಾಸಕ ರಾಜೇಶ್ ನಾಯ್ಕ್ ಅವರನ್ನು ಸನ್ಮಾನಿಸಲಾಯಿತು. ರಸ್ತೆಗೆ ಸ್ಥಳದಾನ ನೀಡಿದ ದಾನಿಗಳನ್ನು ಗೌರವಿಸಲಾಯಿತು. ಜತೆಗೆ ಗ್ರಾ.ಪಂ.ನ ಸ್ಥಳೀಯ ನೂತನ ಸದಸ್ಯರನ್ನು ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ಜಿ.ಪಂ.ಸದಸ್ಯೆ ಕಮಲಾಕ್ಷಿ ಪೂಜಾರಿ, ತಾ.ಪಂ.ಸದಸ್ಯ ಮಹಾಬಲ ಆಳ್ವ, ಮೋಹನರಾಜ ಚೌಟ ಪುಂಜೋಳಿಮಾರುಗುತ್ತು, ನಿರಂಜನ್ ಜೈನ್, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಪ್ರಧಾನ ಕಾರ್ಯದರ್ಶಿ ಡೊಂಬಯ್ಯ ಅರಳ, ತಾ.ಪಂ.ಮಾಜಿ ಉಪಾಧ್ಯಕ್ಷ ದಿನೇಶ್ ಅಮ್ಟೂರು, ರಮನಾಥ ರಾಯಿ, ಪುರುಷೋತ್ತಮ ಶೆಟ್ಟಿ, ಚಿದಾನಂದ ರೈ, ಶ್ರೀಧರ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು. ಗೋಳ್ತಮಜಲು ಗ್ರಾ.ಪಂ.ಸದಸ್ಯ ರಾಜೇಶ್ ಕೊಟ್ಟಾರಿ ಕಾರ್ಯಕ್ರಮ ನಿರ್ವಹಿಸಿದರು.

- Advertisement -

Latest News

error: Content is protected !!