Thursday, July 16, 2026
Homeಕರಾವಳಿಮಂಗಳೂರುಬಂಟ್ವಾಳ: ರಸ್ತೆ ದಾಟುತ್ತಿದ್ದ ಪಾದಚಾರಿಗೆ ಕಾರು ಡಿಕ್ಕಿ, ವ್ಯಕ್ತಿ ಸಾವು

ಬಂಟ್ವಾಳ: ರಸ್ತೆ ದಾಟುತ್ತಿದ್ದ ಪಾದಚಾರಿಗೆ ಕಾರು ಡಿಕ್ಕಿ, ವ್ಯಕ್ತಿ ಸಾವು

- Advertisement -
- Advertisement -

ಬಂಟ್ವಾಳ: ರಸ್ತೆ ದಾಟುತ್ತಿದ್ದ ಪಾದಚಾರಿಗೆ ಕಾರು ಡಿಕ್ಕಿಯಾದ ಪರಿಣಾಮ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಸಾಗರ ಆಡಿಟೋರಿಯಂ ಮುಂಭಾಗ ನಡೆದಿದೆ. ವಿಶ್ವನಾಥ ರೈ ಮೃತ ದುರ್ದೈವಿ.

ಮಧ್ಯಾಹ್ನ ಸುಮಾರಿಗೆ ಬಿ.ಸಿ.ರೋಡ್ ಕಡೆಯಿಂದ ಮೆಲ್ಕಾರ್ ಕಡೆಗೆ ತೆರಳುತ್ತಿದ್ದ ಮಹಿಳೆಯೊಬ್ಬರು ಚಲಾಯಿಸುತ್ತಿದ್ದ ಕಾರು ರಸ್ತೆ ದಾಟುತ್ತಿದ್ದ ವಿಶ್ವನಾಥ ರೈ ಅವರನ್ನು ನೋಡಿಯೂ ಕಾರನ್ನು ನಿಧಾನಿಸದೆ ನಿರ್ಲಕ್ಷ್ಯದಿಂದ ಚಲಾಯಿಸಿ ಡಿಕ್ಕಿ ಹೊಡೆದಿದ್ದಾರೆ.

ಅಪಘಾತದಿಂದ ಗಂಭೀರವಾಗಿ ಗಾಯಗೊಂಡಿದ್ದ ರೈ ಅವರನ್ನು ಬಿ.ಸಿ.ರೋಡ್‌ನ ಸೋಮಯಾಜಿ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಕೆ.ಎಸ್.ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಸಂಜೆ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

- Advertisement -

Latest News

error: Content is protected !!