ಬಂಟ್ವಾಳ; ಕೋಳಿ ಅಂಕದ ಜೂಜಾಟಕ್ಕೆ ದಾಳಿ ನಡೆಸಿ ಪೊಲೀಸರು ಮೂವರನನ್ನು ಬಂಧಿಸಿದ ಘಟನೆ ಬಂಟ್ವಾಳ ತಾಲೂಕು ಸಾಲೆತ್ತೂರು ಗ್ರಾಮದಲ್ಲಿ ನಡೆದಿದೆ. ಉಳ್ಳಾಲ ಬೋಳಿಯಾರ್ ನಿವಾಸಿ ಲತೇಶ್ ಕುಮಾರ್ (37), ಬಂಟ್ವಾಳ ಮಂಚಿ ನಿವಾಸಿ ಸುರೇಶ್ ನಾಯ್ಕ್ ಕೆ (63) ಹಾಗೂ ಬಂಟ್ವಾಳ ವಿಟ್ಲಪಡ್ನೂರು ನಿವಾಸಿ ದಯಾನಂದ (40) ಬಂಧಿತರು.
ಸಾರ್ವಜನಿಕ ಗುಡ್ಡ ಜಾಗದಲ್ಲಿ ಹಣವನ್ನು ಪಣವಾಗಿಟ್ಟು ಕೋಳಿಅಂಕ ಜೂಜಾಟವನ್ನು ಆಡುತ್ತಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರಾದ ರಾಮಕೃಷ್ಣರವರಿಗೆ ಮಾಹಿತಿ ಬಂದ ಮೇರೆಗೆ, ಠಾಣಾ ಸಿಬ್ಬಂದಿಯೊಂದಿಗೆ ಮಾಹಿತಿ ಬಂದ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ ಹಣವನ್ನು ಪಣವಾಗಿಟ್ಟು ಕೋಳಿಅಂಕ ಜೂಜಾಟ ನಡೆಯುತ್ತಿರುವುದು ಕಂಡುಬಂದಿದ್ದು, ದಾಳಿ ನಡೆಸಿ ಮೂವರನ್ನು ವಶಕ್ಕೆ ಪಡೆದು ಜೂಜಾಟಕ್ಕೆ ಬಳಸಿದ ರೂ 1550/- ನಗದು, ಅಂಕದ ಕೋಳಿಗಳು-03 ಹಾಗೂ ಇತರೆ ಸೊತ್ತುಗಳನ್ನು ಸ್ವಾಧೀನಪಡಿಸಿ, ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 129/2026, ಕಲಂ: 87, 93 KARNATAKA POLICE ACT, 1963, ಕಲಂ: 3,11 PREVENTION OF CRUELTY TO ANIMALS ACT, 1960, ಕಲಂ: 112 BNS ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.


