Wednesday, June 24, 2026
Homeಕರಾವಳಿಮಂಗಳೂರುಬಂಟ್ವಾಳ; ಅಕ್ರಮ ಕೋಳಿ ಅಂಕಕ್ಕೆ ಪೊಲೀಸರ ದಾಳಿ;  16 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು, ಶಾಸಕ...

ಬಂಟ್ವಾಳ; ಅಕ್ರಮ ಕೋಳಿ ಅಂಕಕ್ಕೆ ಪೊಲೀಸರ ದಾಳಿ;  16 ಮಂದಿಯನ್ನು ವಶಕ್ಕೆ ಪಡೆದ ಪೊಲೀಸರು, ಶಾಸಕ ಅಶೋಕ್ ರೈ ವಿರುದ್ಧವೂ ಪ್ರಕರಣ ದಾಖಲು

- Advertisement -
- Advertisement -

ಬಂಟ್ವಾಳ; ಅಕ್ರಮ ಕೋಳಿ ಅಂಕಕ್ಕೆ ಪೊಲೀಸರು ದಾಳಿ ನಡೆಸಿ,  16 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಶಾಸಕ ಅಶೋಕ್ ರೈ ವಿರುದ್ಧವೂ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ದಿನಾಂಕ 20-12-2025 ರಂದು ಮಧ್ಯಾಹ್ನದ ವೇಳೆ ಬಂಟ್ವಾಳ ಕೇಪು ಗ್ರಾಮದ ಕೇಪು ಎಂಬಲ್ಲಿ, ಮುರಳೀಧರ ರೈ ಎಂಬವರ ಗದ್ದೆಯಲ್ಲಿ, ಕಾನೂನುಬಾಹಿರವಾಗಿ ಕೋಳಿ ಅಂಕ ಆಡಲು ಮುಂದಾಗುತ್ತಿರುವ ಬಗ್ಗೆ ಮಾಹಿತಿ ಬಂದ ಮೇರೆಗೆ, ವಿಟ್ಲ ಪೊಲೀಸ್‌ ಠಾಣಾ ಪೊಲೀಸ್‌ ನಿರೀಕ್ಷಕರು, ಠಾಣಾ ಅಧಿಕಾರಿ/ಸಿಬ್ಬಂದಿಯೊಂದಿಗೆ ಸ್ಥಳಕ್ಕೆ ತೆರಳಿ ಪರಿಶೀಲಿಸಿದಾಗ, ಹಲವು ಜನರು ಕೋಳಿ‌ ಅಂಕಕ್ಕೆ ಬಳಸುವ ಕೋಳಿಗಳನ್ನು ಹಿಡಿದುಕೊಂಡು ಗುಂಪು ಸೇರಿರುವುದು ಕಂಡಿದೆ. ಈ ವೇಳೆ ಪೊಲೀಸರು ಅಲ್ಲಿ ಸೇರಿದ್ದ ಜನರಿಗೆ ಕಾನೂನುಬಾಹಿರ ಕೋಳಿ ಅಂಕದ ಬಗ್ಗೆ ಸೂಕ್ತ ಕಾನೂನು ತಿಳುವಳಿಕೆ ನೀಡಿದ್ದಾರೆ. ಈ ವೇಳೆ ಸ್ಥಳದಲ್ಲಿ ಹಾಜರಿದ್ದ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಅಶೋಕ್ ರೈ ಅವರು , ಸ್ಥಳದಲ್ಲಿ ಸೇರಿದ್ದ ಜನರಿಗೆ ಕಾನೂನು ಬಾಹಿರವಾದ ಕೋಳಿ ಅಂಕವನ್ನು  ಮುಂದುವರಿಸುವಂತೆ ಪ್ರಚೋದನೆ ಮತ್ತು ದುಷ್ಪ್ರೇರಣೆಯನ್ನು ನೀಡಿದ್ದಾರೆ. ಹಾಗಾಗಿ ಸ್ಥಳದಲ್ಲಿ ಸೇರಿದ್ದ ಜನರು ಕಾನೂನು ಬಾಹಿರವಾಗಿ ಕೋಳಿ ಅಂಕ ಆಟವನ್ನು ಪ್ರಾರಂಭಿಸಿದ್ದಾರೆ. ಈ ವೇಳೆ ವಿಟ್ಲ ಪೊಲೀಸ್‌ ಠಾಣಾ ಪೊಲೀಸ್‌ ನಿರೀಕ್ಷಕರು ಅಗತ್ಯ ಪೊಲೀಸ್ ಭದ್ರತೆಯನ್ನು ಏರ್ಪಡಿಸಿ ಕಾನೂನು ಬಾಹಿರವಾಗಿ ಕೋಳಿ ಅಂಕ ಆಟ ಆಡುತ್ತಿದ್ದ 16 ಜನರನ್ನು ವಶಕ್ಕೆ ಪಡೆದು, 22 ಹುಂಜ ಕೋಳಿಗಳನ್ನು ಹಾಗೂ ಕೋಳಿ ಅಂಕಕ್ಕೆ ಬಳಸುವ ಬಾಳು (ಕತ್ತಿಗಳನ್ನು) ಸ್ವಾಧೀನಪಡಿಸಿರುತ್ತಾರೆ. ಈ ಬಗ್ಗೆ ಮರಳೀಧರ ರೈ ಎಂಬವರು ತಮ್ಮ ಬಾಬ್ತು ಜಾಗದಲ್ಲಿ ಯಾವುದೇ ಸೂಕ್ತ ಪರವಾನಿಗೆ ಪಡೆಯದೇ, ಕಾನೂನು ಬಾಹಿರ ಕೃತ್ಯಕ್ಕೆ ಅನುವು ಮಾಡಿಕೊಟ್ಟಿರುವ ಹಿನ್ನೆಲೆಯಲ್ಲಿ, ಕಾನೂನು ಬಾಹಿರ ಕೃತ್ಯವನ್ನು ನಡೆಸಲು ಪ್ರಚೋದನೆ ಮತ್ತು ದುಷ್ಪ್ರೇರಣೆಯನ್ನು ನೀಡಿದ ಹಿನ್ನೆಲೆಯಲ್ಲಿ ಪುತ್ತೂರು ವಿಧಾನಸಭಾ ಶಾಸಕರ ವಿರುದ್ಧ ಹಾಗೂ ಕಾನೂನು ಬಾಹಿರ ಕೃತ್ಯದಲ್ಲಿ ತೊಡಗಿಸಿಕೊಂಡಿದ್ದ 16 ಜನರ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!