ಬಂಟ್ವಾಳ ಪಿ ಎಸ್ ಐ ಖೀರಪ್ಪ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಪೋಸ್ಟ್ ಹಾಕಿದ ಬಗ್ಗೆ ಖೀರಪ್ಪ ಅವರ ಮಗಳು ಕ್ಷಮಾ ಶಿರಸಿ ನ್ಯೂ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಉಪನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ನನ್ನ ತಂದೆ ಖೀರಪ್ಪ ಘಟಕಾಂಬಳೆ ರವರು ಇತ್ತೀಚೆಗೆ ವೈಯಕ್ತಿಕ ಕಾರಣದಿಂದ ಆತ್ಮಹತ್ಯೆ ಮಾಡಿಕೊಂಡಿದ್ದು, ನಾನು ದಿನಾಂಕ: 28.07.2025 ರಂದು ತನ್ನ ಮೊಬೈಲ್ ನಲ್ಲಿ ಸಾಮಾಜಿಕ ಜಾಲತಾಣವನ್ನು ಪರಿಶೀಲಿಸಿಸುತ್ತಿದ್ದಾಗ, ನಾಲ್ಕು ಇನ್ಟಾಗ್ರಾಂ ಖಾತೆಗಳಲ್ಲಿ ನನ್ನ ತಂದೆಯ ಸಮವಸ್ತ್ರದಲ್ಲಿರುವ ಭಾವಚಿತ್ರವನ್ನು ಹಾಕಿ, ಅವರ ಆತ್ಮಹತ್ಯೆಗೆ ಹಾಗೂ ಧರ್ಮಸ್ಥಳದಲ್ಲಿ ಎಸ್.ಐ.ಟಿ ತಂಡದಿಂದ ನಡೆಯುತ್ತಿರುವ ಪ್ರಕರಣವೊಂದರ ತನಿಖೆಗೂ ಸಂಬಂಧ ಕಲ್ಪಿಸುವಂತಹ ಮಾನ ಹಾನಿಕರ ಪೋಸ್ಟ್ ಗಳನ್ನು ಪ್ರಸಾರ ಮಾಡಿರುವುದು ಕಂಡುಬಂದಿರುತ್ತದೆ. ನನ್ನ ತಂದೆಯ ಬಗ್ಗೆ ಉದ್ದೇಶ ಪೂರ್ವಕವಾಗಿ ಅವಮಾನ ಮಾಡಿ ಶಾಂತಿ ಭಂಗ ಮಾಡುತ್ತಿರುವ, ಸಾರ್ವಜನಿಕರಿಗೆ ಭೀತಿಯನ್ನು ಹುಟ್ಟಿಸುವಂತಹ ಪೋಸ್ಟ್ ಗಳನ್ನು ಪ್ರಸಾರ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.


