ಬಂಟ್ವಾಳ: 2028ರ ವಿಧಾನಸಭೆ ಚುನಾವಣೆಯಲ್ಲಿ ರಮಾನಾಥ ರೈ ಮತ್ತೆ ಸ್ಪರ್ಧಿಸ್ತಾರೆ, ಅವರನ್ನು ಗೆಲ್ಲಿಸಿ ಮತ್ತೆ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬಂಟ್ವಾಳದ ನಾವೂರು ಕೂಡಿಬೈಲು ಎಂಬಲ್ಲಿ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಶನಿವಾರ ನಡೆದ ಮುಡೂರು – ಪಡೂರು ಜೋಡುಕರೆ ಬಂಟ್ವಾಳ ಕಂಬಳದ ಸಭಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ 2028ಕ್ಕೂ ನಾವೇ ಅಧಿಕಾರಕ್ಕೆ ಬಂದೇ ಬರ್ತೀವಿ. ನಾವು ಅಧಿಕಾರದಲ್ಲಿದ್ದಾಗ ಕಂಬಳಕ್ಕೆ ಏನು ಪ್ರೋತ್ಸಾಹ ನೀಡಬೇಕೋ ಅದಕ್ಕೆ ಪ್ರೋತ್ಸಾಹ ನೀಡುತ್ತೇವೆ. ಕಂಬಳಕ್ಕೆ ಹಣಕಾಸಿನ ನೆರವನ್ನೂ ಕೊಡ್ತೇವೆ, ರಮಾನಾಥ ರೈ ಅವರನ್ನು ಸೋಲಿಸಿದ್ದು ಬೇಸರ ತಂದಿದೆ, ಮುಂದಿನ ಚುನಾವಣೆಯಲ್ಲಿ ಅವರೇ ಅಭ್ಯರ್ಥಿಯಾಗ್ತಾರೆ, ಅವರನ್ನು ಮತ್ತೆ ಗೆಲ್ಲಿಸಿ ಎಂದಿದ್ದಾರೆ.
ರಮಾನಾಥ ರೈ ಅವರು ತಮ್ಮ ಶಾಸಕ, ಸಚಿವರಾಗಿದ್ದಾಗ ಬಂಟ್ವಾಳ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದರೂ ಜನರು ಸೋಲಿಸಿರುವುದು ನೋವಿನ ಸಂಗತಿಯಾಗಿದೆ. ಇನ್ನೊಂದು ಸಾರಿ ಅವರು ನಿಲ್ಲುತ್ತಾರೆ. 2028ಕ್ಕೆ ಮತ್ತೆ ಅಭ್ಯರ್ಥಿ ಆಗುತ್ತಾರೆ ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.


