- Advertisement -


- Advertisement -
ಬಂಟ್ವಾಳ;: ಶಾಲೆ ಮುಗಿಸಿ ಮನೆಗೆ ತೆರಳಲು ರಸ್ತೆ ದಾಟುತ್ತಿದ್ದ ವಿದ್ಯಾರ್ಥಿನಿಯ ಮೇಲೆ ಲಾರಿಯೊಂದು ಹರಿದ ಪರಿಣಾಮ ಆಕೆ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಮಾಣಿ ಸಮೀಪದ ನೇರಳಕಟ್ಟೆಯಲ್ಲಿ ಗುರುವಾರ ಸಂಜೆ ಸಂಭವಿಸಿದೆ.
ನೇರಳಕಟ್ಟೆ ನಿವಾಸಿ, ಕಂಬಳಬೆಟ್ಟುವಿನ ಜನಪ್ರಿಯ ಸೆಂಟ್ರಲ್ ಸ್ಕೂಲ್ ವಿದ್ಯಾರ್ಥಿನಿ ಫಾತಿಮಾ ಇಝಾ ಇಲ್ಯಾಸ್ ಮೃತ ದುರ್ದೈವಿ.
ಗುರುವಾರ ಸಂಜೆ ಶಾಲೆ ಬಿಟ್ಟ ಬಳಿಕ ಫಾತಿಮಾ ಬಸ್ಸಿನಲ್ಲಿ ನೇರಳಕಟ್ಟೆಗೆ ಬಂದಿಳಿದಿದ್ದಳು. ಮನೆಗೆ ಹೋಗುವ ಸಲುವಾಗಿ ರಸ್ತೆ ದಾಟುತ್ತಿದ್ದ ವೇಳೆ ಅತಿವೇಗವಾಗಿ ಬಂದ ಲಾರಿ ಆಕೆಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಲಾರಿಯ ಚಕ್ರದಡಿ ಸಿಲುಕಿ ಗಂಭೀರವಾಗಿ ಗಾಯಗೊಂಡ ಬಾಲಕಿ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾಳೆ.
ವಿಟ್ಲ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
- Advertisement -


