Thursday, June 4, 2026
Homeಕರಾವಳಿಮಂಗಳೂರುಬಂಟ್ವಾಳ; ಅಬ್ದುಲ್ ರಹಿಮಾನ್ ಹತ್ಯೆ ಹಾಗೂ ಶಾಫಿ ಮೇಲಿನ ಹಲ್ಲೆ ಪ್ರಕರಣದ ಮತ್ತಿಬ್ಬರು ಆರೋಪಿಗಳ ಬಂಧನ

ಬಂಟ್ವಾಳ; ಅಬ್ದುಲ್ ರಹಿಮಾನ್ ಹತ್ಯೆ ಹಾಗೂ ಶಾಫಿ ಮೇಲಿನ ಹಲ್ಲೆ ಪ್ರಕರಣದ ಮತ್ತಿಬ್ಬರು ಆರೋಪಿಗಳ ಬಂಧನ

- Advertisement -
- Advertisement -

ಬಂಟ್ವಾಳ; ಅಬ್ದುಲ್ ರಹಿಮಾನ್ ಹತ್ಯೆ ಹಾಗೂ ಶಾಫಿ ಮೇಲಿನ ಹಲ್ಲೆ ಪ್ರಕರಣದ ಮತ್ತಿಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ತೆಂಕಬೆಳ್ಳೂರು ನಿವಾಸಿ ಅಭಿನ್ ರೈ (32) ಹಾಗೂ ಬಡಗಬೆಳ್ಳೂರು ನಿವಾಸಿ ತೇಜಾಕ್ಷ(24) ಬಂಧಿತರು. ಈಗಾಗಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ಇದರೊಂದಿಗೆ ಬಂಧಿತರ ಸಂಖ್ಯೆ ಏಳಕ್ಕೆ ಏರಿಕೆಯಾಗಿದೆ.

ಈ ಪ್ರಕರಣ ಸಂಬಂಧ ಬಂಟ್ವಾಳ ತಾಲ್ಲೂಕಿನ ಕುರಿಯಾಳ ಗ್ರಾಮದ ಮುಂಡರಕೋಡಿ ಮನೆಯ ದೀಪಕ್ (21), ಅಮ್ಮುಂಜೆ ಗ್ರಾಮದ ಶಿವಾಜಿ ನಗರ ಭದ್ರಕಾಳಿ ದೇವಸ್ಥಾನ ಬಳಿಯ ನಿವಾಸಿ ಪೃಥ್ವಿರಾಜ್ (21) ಹಾಗೂ ಬಂಟ್ವಾಳದ ನಿವಾಸಿ ಚಿಂತನ್ (19), ತೆಂಕಬೆಳ್ಳೂರು ಗ್ರಾಮದ ಸುಮಿತ್ ಅಚಾರ್ಯ (27) ಹಾಗೂ ಬಡಗಬೆಳ್ಳೂರು ಗ್ರಾಮದ ರವಿರಾಜ್ (23) ಎಂಬುವರನ್ನು ಪೊಲಿಸರು ಈಗಾಗಲೇ ಬಂಧಿಸಿದ್ದಾರೆ.

- Advertisement -

Latest News

error: Content is protected !!