- Advertisement -
- Advertisement -
ಬಂಟ್ವಾಳ: ಸುಮಾರು ಐದು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕಿನ ಮಂಚಿ ನಿವಾಸಿ ಇರ್ಷಾದ್ ಅಲಿಯಾಸ್ ಮುಹಮ್ಮದ್ ಇರ್ಷಾದ್ ಬಂಧಿತ ಆರೋಪಿ. ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ಈತ ನ್ಯಾಯಾಲಯದ ವಿಚಾರಣೆಗೆ ಗೈರುಹಾಜರಾಗಿ ತಲೆಮರೆಸಿಕೊಂಡಿದ್ದನು.
ಅಕ್ಟೋಬರ್ 21ರಂದು ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಈತನ ಪಾಸ್‌ಪೋರ್ಟ್ ವಶಕ್ಕೆ ಪಡೆದುಕೊಂಡಿದ್ದಾರೆ. ಬಳಿಕ ಬಂಧಿತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
- Advertisement -


