- Advertisement -
- Advertisement -
ಬಂಟ್ವಾಳ, ಎ.4: ಕ್ಷುಲ್ಲಕ ಕಾರಣಕ್ಕೆ ಮೂರು ಮಕ್ಕಳ ತಾಯಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್ ಕೈಕಂಬ ಸಮೀಪದ ಪರ್ಲಿಯಾ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ.
ತುಂಬೆ ನಿವಾಸಿ ಅಬ್ಬಾಸ್ ಅಲಿ ಎಂಬವರ ಪತ್ನಿ ರಮೀಝಾ ಬಾನು(29) ಆತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ. ದಂಪತಿಗೆ ಮೂವರು ಮಕ್ಕಳು ಇದ್ದು, ತುಂಬೆ ನಿವಾಸಿಗಳಾದ ದಂಪತಿ ಕೆಲವು ಸಮಯದ ಹಿಂದೆ ಪರ್ಲಿಯಾದಲ್ಲಿ ಬಾಡಿಗೆಗೆ ಮನೆ ಪಡೆದು ವಾಸವಾಗಿದ್ದರು.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆದರೆ ಲಾಕ್ ಡೌನ್ ಸಮಯದಲ್ಲಿ ಹೊರ ಹೋಗದಂತೆ ಹೇಳಿದರೂ ಆಟೋ ಚಾಲಕನಾಗಿರುವ ಪತಿ ಆಟೋದೊಂದಿಗೆ ಮನೆಯಿಂದ ಹೊರ ಹೋದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಸ್ಥಳಕ್ಕೆ ಬಂಟ್ವಾಳ ನಗರ ಠಾಣೆಯ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ.
- Advertisement -