- Advertisement -
- Advertisement -
ಮಂಗಳೂರು: ಮಂಗಳೂರಿನಲ್ಲಿ ಕೊರೊನ ಸೋಂಕಿನಿಂದ ಸಾವು ವಿಚಾರ ಮೃತರ ಅತ್ತೆಯ ಸ್ಥಿತಿ ಗಂಭೀರವಾಗಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈಗ ಮೃತಳ ಪತಿ ಮತ್ತು ಮಗನನ್ನು ಕ್ವಾರಂಟೈನ್ ಮಾಡಲಾಗಿದೆ.
ಮೂವರ ಗಂಟಲು ದ್ರವವನ್ನು ಸಂಗ್ರಹಿಸಿ ಪರೀಕ್ಷೆ ಕಳುಹಿಸಲಾಗಿದೆ. ಮೃತ ಮಹಿಳೆ ಮಗ ಮಾರ್ಚ್ 16 ರಂದು ದುಬೈನಿಂದ ಬಂದಿದ್ದು, ಈತನಿಂದಲೇ ಸೋಂಕು ಬಂದಿರಬಹುದಾ ಎಂದು ಶಂಕಿಸಲಾಗುತ್ತಿದೆ,
ಕೊರೊನಾಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಮಹಿಳೆ ಮೃತಪಟ್ಟ ಹಿನ್ನೆಲೆಯಲ್ಲಿ ಬಂಟ್ವಾಳ ಕೆಳಗಿನ ಪೇಟೆ ಸೀಲ್‍ಡೌನ್ ಮಾಡಲಾಗಿದೆ. ಸೀಲ್ ಡೌನ್ ಆಗಿದೆ, ಯಾರು ಮನೆಯಿಂದ ಹೊರಬರಬೇಡಿ ಎಂದು ಪೊಲೀಸರು ಜೀಪ್ ನಲ್ಲಿ ಎಚ್ಚರಿಕೆ ನೀಡುತ್ತಿದ್ದಾರೆ.
- Advertisement -