Saturday, June 6, 2026
Homeಕರಾವಳಿಬಂಟ್ವಾಳ: ಯುವತಿ ಸ್ನಾನ ಮಾಡುತ್ತಿದ್ದಾಗ ಮೊಬೈಲ್ ನಲ್ಲಿ ವಿಡಿಯೋ ಮಾಡುತ್ತಿದ್ದಾತನ ಬಂಧನ

ಬಂಟ್ವಾಳ: ಯುವತಿ ಸ್ನಾನ ಮಾಡುತ್ತಿದ್ದಾಗ ಮೊಬೈಲ್ ನಲ್ಲಿ ವಿಡಿಯೋ ಮಾಡುತ್ತಿದ್ದಾತನ ಬಂಧನ

- Advertisement -
- Advertisement -

ಬಂಟ್ವಾಳ: ಯುವತಿ ಸ್ನಾನ ಮಾಡುತ್ತಿದ್ದಾಗ ಮೊಬೈಲ್ ನಲ್ಲಿ ವಿಡಿಯೋ ಮಾಡುತ್ತಿದ್ದ ಯುವಕನೊಬ್ಬನನ್ನು ಬಂಟ್ವಾಳ ನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಗ್ರಾರ್ ನಿವಾಸಿ ಜಗದೀಪ್ ಆಚಾರ್ಯ ಎಂಬಾತನನ್ನು ಪೋಲೀಸರು ವಶಕ್ಕೆ ಪಡೆದಿದ್ದಾರೆ.

ಜಕ್ರಿಬೆಟ್ಟು ಎಂಬಲ್ಲಿ ಮನೆಯಲ್ಲಿ ಯುವತಿಯೊಬ್ಬಳು ಸ್ನಾನ ಮಾಡುತ್ತಿದ್ದಾಗ ವೇಳೆ ಜಗದೀಪ್ ಆಚಾರ್ಯ ಗೋಡೆಯ ಸೆರೆಯ ಮಧ್ಯೆ ಮೊಬೈಲ್ ನಲ್ಲಿ  ಚಿತ್ರೀಕರಣ ಮಾಡುತ್ತಿದ್ದ. ಇದನ್ನು ಕಂಡ ಯುವತಿ ಜೋರಾಗಿ ಬೊಬ್ಬೆ ಹಾಕಿದ್ದಾಳೆ, ಈ ಸಂದರ್ಭ ಆತ ಓಡಿ ಹೋಗಿದ್ದಾನೆ.

ಸದ್ಯ ಆತನನ್ನು ವಶಕ್ಕೆ ಪಡೆದಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದು ಆತ ಇದೇ ರೀತಿ ಈ ಹಿಂದೆ ಕೃತ್ಯ ಎಸಗಿದ್ದಾನಾ ಎಂಬ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!