- Advertisement -
- Advertisement -
ಬಂಟ್ವಾಳ: ಸ್ಕೂಲ್ ಡೇ ಗೆ ಬಂದಿದ್ದ ಯುವತಿ ಮೇಲೆ ಅತ್ಯಾಚಾರವೆಸಗಿರುವ ಘಟನೆ ಬಂಟ್ವಾಳದಲ್ಲಿ ನಡೆದಿದೆ.ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ಜಯಂತ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಡಿ. 14 ರಂದು ನಾವೂರು ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮ ನೋಡಲು ಮನೆಯವರ ಜೊತೆ ತೆರಳಿದ್ದ ಯುವತಿಯನ್ನು ಆರೋಪಿ ಜಯಂತ ಶಾಲಾ ಕೊಠಡಿಯಲ್ಲಿ ಕೂಡಿ ಹಾಕಿ ಬಲಾತ್ಕಾರವಾಗಿ ಅತ್ಯಾಚಾರ ಮಾಡಿದ್ದಾನೆ. ಈ ಬಗ್ಗೆ ನೊಂದ ಯುವತಿಯ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಗೆ ದೂರು ನೀಡಿದ್ದಾಳೆ.
ಆರೋಪಿಯನ್ನು ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್ ನೇತೃತ್ವದ ಬಂಧಿಸಿದೆ. ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
- Advertisement -