Friday, June 5, 2026
Homeಕರಾವಳಿರೈಲಿನಲ್ಲಿ ಬೆಂಗಳೂರಿಗೆ ಹೋಗುತ್ತಿದ್ದಾಗ ಬಂಟ್ವಾಳದ ವ್ಯಕ್ತಿ ಹಾಸನದಲ್ಲಿ ಹೃದಯಾಘಾತವಾಗಿ ಸಾವು

ರೈಲಿನಲ್ಲಿ ಬೆಂಗಳೂರಿಗೆ ಹೋಗುತ್ತಿದ್ದಾಗ ಬಂಟ್ವಾಳದ ವ್ಯಕ್ತಿ ಹಾಸನದಲ್ಲಿ ಹೃದಯಾಘಾತವಾಗಿ ಸಾವು

- Advertisement -
- Advertisement -

ಬಂಟ್ವಾಳ: ರೈಲಿನಲ್ಲಿ ಬೆಂಗಳೂರಿಗೆ ಹೋಗುತ್ತಿದ್ದಾಗ ಬಂಟ್ವಾಳದ ವ್ಯಕ್ತಿ ಹಾಸನದಲ್ಲಿ ಹೃದಯಾಘಾತವಾಗಿ ಸಾವನ್ನಪ್ಪಿದ ಘಟನೆ  ನಿನ್ನೆ ರಾತ್ರಿ ನಡೆದಿದೆ. ಬಂಟ್ವಾಳ ಬೈಪಾಸ್ ನಿವಾಸಿ ಜನಾರ್ದನ ಕುಲಾಲ್ ಮೃತ ದುರ್ದೈವಿ.

ಜನಾರ್ದನ ಕುಲಾಲ್ ಅವರು ತಮ್ಮ ಕುಟುಂಬದ ಜತೆ ನಿನ್ನೆ ರಾತ್ರಿ ರೈಲಿನಲ್ಲಿ  ಬೆಂಗಳೂರಿಗೆ ತೆರಳುತ್ತಿದ್ದರು. ಈ ವೇಳೆ ಹಾಸನ ತಲುಪುತ್ತಿದ್ದಂತೆ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಅವರನ್ನು ಹಾಸನ ರೈಲು ನಿಲ್ದಾಣದಿಂದ ಹಾಸನ ಆಸ್ಪತ್ರೆಗೆ ಸಾಗಿಸಲಾಗಿದ್ದು, ಪರೀಕ್ಷಿಸಿದ ವೈದ್ಯರು ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಸಾಮಾಜಿಕವಾಗಿ ಸಕ್ರೀಯರಾಗಿದ್ದ ಅವರು ಬಂಟ್ವಾಳ ಸಮಾಜ ಸೇವಾ ಸಹಕಾರಿ ಬ್ಯಾಂಕಿನ ನಿರ್ದೇಶಕರಾಗಿದ್ದು, ಕಾರು ಚಾಲಕರಾಗಿದ್ದ ಅವರು ಕುಲಾಲ್ ಸಂಘಟನೆ ಬೆಳವಣಿಗೆಗೆ ಶ್ರಮಿಸಿದ್ದರು. ಸಾಕಷ್ಟು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಿದ್ದರು.

- Advertisement -

Latest News

error: Content is protected !!