- Advertisement -
- Advertisement -
ಬಂಟ್ವಾಳ; ವಿದ್ಯುತ್ ಶಾಕ್ ತಗುಲಿ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಉರ್ಕುಂಜ ಎಂಬಲ್ಲಿ ನಡೆದಿದೆ.ಉಳಿ ಗ್ರಾಮದ ನೆಕ್ಕಿಲ ಪಲ್ಕೆ ನಿವಾಸಿ ಸದಾನಂದ ಗೌಡ ಅವರ ಪುತ್ರ ದೇವದಾಸ್ (35) ಮೃತ ದುರ್ದೈವಿ.
ಎಲೆಕ್ನಿಷಿಯನ್ ಆಗಿರುವ ದೇವದಾಸ್ ಉಳಿ ಗ್ರಾಮದ, ಉರ್ಕುಂಜ ಎಂಬಲ್ಲಿ ಮನೆಯೊಂದರ ವಯರಿಂಗ್ ಕೆಲಸ ಮಾಡಿ, ಮನೆಯ ಹೊರಗಡೆಯಲ್ಲಿದ್ದ ಮೈನ್ ಸ್ವಿಚ್ ಬಳಿ ಕೆಲಸ ಮಾಡುತ್ತಿರುವಾಗ ಆಕಸ್ಮಿಕವಾಗಿ ವಿದ್ಯುತ್ ಶಾಕ್ ತಗುಲಿದೆ. ಪರಿಣಾಮ ಕೆಳಗೆ ಬಿದ್ದು ಗಾಯಗೊಂಡಿದ್ದಾರೆ.ತಕ್ಷಣ ಸ್ಥಳದಲ್ಲಿದ್ದವರು ಅವರನ್ನು ಬಂಟ್ವಾಳ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದು, ಅಲ್ಲಿನ ವೈದ್ಯರು ಪರೀಕ್ಷಿಸಿದಾಗ ದೇವದಾಸ್ ಮೃತಪಟ್ಟಿರುವುದನ್ನು ಖಚಿತಪಡಿಸಿದ್ದಾರೆ.ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -