Wednesday, June 3, 2026
Homeಕರಾವಳಿಬಂಟ್ವಾಳ ಮೂಲದ ವ್ಯಕ್ತಿಯನ್ನು ಪೆಟ್ರೋಲ್ ಸುರಿದು ಮೂಡಿಗೆರೆಯಲ್ಲಿ ಕೊಲೆ ಮಾಡಿದ ದುಷ್ಕರ್ಮಿಗಳು

ಬಂಟ್ವಾಳ ಮೂಲದ ವ್ಯಕ್ತಿಯನ್ನು ಪೆಟ್ರೋಲ್ ಸುರಿದು ಮೂಡಿಗೆರೆಯಲ್ಲಿ ಕೊಲೆ ಮಾಡಿದ ದುಷ್ಕರ್ಮಿಗಳು

- Advertisement -
- Advertisement -

ಬಂಟ್ವಾಳ ಮೂಲದ ವ್ಯಕ್ತಿಯನ್ನು ಪೆಟ್ರೋಲ್ ಸುರಿದು ಮೂಡಿಗೆರೆಯಲ್ಲಿ ಕೊಲೆ ಮಾಡಲಾದ ಘಟನೆ ನಡೆದಿದೆ. ಬಂಟ್ವಾಳ ತಾಲೂಕಿನ ಇರಾ ಗ್ರಾಮದ ನಿವಾಸಿ ಅಬ್ಬಾಸ್ ಅವರ ಪುತ್ರ ಫವಾಜ್ ಕೊಲೆಯಾದ ವ್ಯಕ್ತಿ. ಫವಾಜ್ ಎಂಬಾತನನ್ನು ಆರೋಪಿಗಳು ಪೆಟ್ರೋಲ್ ಸುರಿದು ಕೊಲೆ ಮಾಡಿ ಬಳಿಕ ಚಿಕ್ಕಮಗಳೂರು ಮೂಡಿಗೆರೆಯ ಬಣಕ್ಕಲ್ ಎಂಬಲ್ಲಿ ಗುಡ್ಡದಲ್ಲಿ ಬಿಸಾಡಿ ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ. ಫಯಾಜ್ ಅವರು ಮದುವೆಯಾಗಿದ್ದು, ಬಳಿಕ ಪತ್ನಿಯಿಂದ ದೂರವಾಗಿದ್ದ.

ಈತ ಗಾಂಜಾ ಮಾರಾಟ ದಂಧೆಯಲ್ಲಿ ತೊಡಗಿದ್ದಲ್ಲದೆ ,ಗಾಂಜಾ ವ್ಯಸನಿಯಾಗಿದ್ದ ಎನ್ನಲಾಗಿದೆ. ಒಳ್ಳೆಯ ಕುಟುಂಬದ ಹಿನ್ನೆಲೆ ಇದ್ದು, ಈತನ ಗುಣದಿಂದ ಬೇಸತ್ತು ಆತನನ್ನು ಮನೆಯವರು ಮನೆಯಿಂದ ಹೊರ ಹಾಕಿದ್ದರು ಎನ್ನಲಾಗಿದೆ. ಗಾಂಜಾ ವಹಿವಾಟು ಜೋರಾಗಿ ನಡೆಸುತ್ತಿದ್ದ ಈತನಿಗೆ ಗಾಂಜಾ ಪೆಡ್ಲರ್ ಗಳ ಜೊತೆ ಅತಿಯಾದ ಸಂಪರ್ಕ ಎನ್ನಲಾಗುತ್ತಿದೆ.

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಇವರೊಳಗೆ ಹಣಕಾಸಿನ ಅಥವಾ ಗಾಂಜಾ ವಿಚಾರದಲ್ಲಿ ವೈಮಸ್ಸು ಉಂಟಾಗಿ ಈತನನ್ನು ಸುಮಾರು ಹತ್ತು ದಿನಗಳ ಹಿಂದೆ ಇರಾದಿಂದ ಕಿಡ್ನಾಪ್ ಮಾಡಿದ್ದರು ಎನ್ನಲಾಗಿದೆ. ಬಳಿಕ ಯಾವುದೋ ಅಜ್ಞಾತ ಸ್ಥಳದಲ್ಲಿ ಈತನನ್ನು ಕೂಡಿ ಇಟ್ಟು ಪೆಟ್ರೋಲ್ ಸುರಿದು ಕೊಲೆ ಮಾಡಲಾಗಿದೆ. ಕೊಲೆ ಮಾಡಿ ಬಣಕ್ಕಲ್ ಎಂಬಲ್ಲಿ ಗುಡ್ಡದಲ್ಲಿ ಬಿಸಾಡಿದ್ದಾರೆ.

ವಗ್ಗ ಅಥವಾ ಕಾವಳಕಟ್ಟೆ ಮೂಲದ ಯುವಕರು ಈತನ ಕೊಲೆಯ ಹಿಂದಿದ್ದಾರೆಂಬ ಶಂಕೆಯಿದ್ದು,  ಆರೋಪಿಗಳ ಪತ್ತೆಗಾಗಿ‌ ಪೋಲೀಸರು ಬಲೆ ಬೀಸಿದ್ದಾರೆ.

- Advertisement -

Latest News

error: Content is protected !!