Thursday, June 4, 2026
Homeಕರಾವಳಿಬಂಟ್ವಾಳದಲ್ಲಿ ಚೂರಿ ಇರಿತ ಪ್ರಕರಣ; ಮೂವರು ಆರೋಪಿಗಳ ಬಂಧನ

ಬಂಟ್ವಾಳದಲ್ಲಿ ಚೂರಿ ಇರಿತ ಪ್ರಕರಣ; ಮೂವರು ಆರೋಪಿಗಳ ಬಂಧನ

- Advertisement -
- Advertisement -

ಬಂಟ್ವಾಳದಲ್ಲಿ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.ಬಂಟ್ವಾಳ ನಗರ ಠಾಣಾ ಪೋಲೀಸರು ಮೂವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ‌.
‌‌‌ ಶೋಧನ್,ಪ್ರಕಾಶ್ ಯಾನೆ ಮುನ್ನ ಹಾಗೂ ಸಹಕಾರ ನೀಡಿದ ಇನ್ನೋರ್ವ ಆರೋಪಿಯನ್ನು ಪೋಲೀಸರು ಬಂಧಿಸಿದ್ದಾರೆ.
‌ಅ.26 ರಂದು‌ ರಾತ್ರಿ ವೇಳೆ ಮೆಲ್ಕಾರ್ ಜಂಕ್ಷನ್ ನಲ್ಲಿ ಶಾರದೋತ್ಸವ ಕಾರ್ಯಕ್ರಮಕ್ಕೆ ಶುಭಕೋರಿ ಹಾಕಲಾಗಿದ್ದ ಬ್ಯಾನರ್ ತೆರವು ಮಾಡುವ ವೇಳೆ ದೇವದಾಸ್ ಮತ್ತು ಶಂಕರ ಎಂಬವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಲ್ಲದೆ ಚೂರಿಯಿಂದ ಇರಿದು ಪರಾರಿಯಾಗಿದ್ದರು.
ಘಟನೆಯಿಂದ ಗಾಯಗೊಂಡವರು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ .ಚೂರಿ ಇರಿದು ಪರಾರಿಯಾಗಿದ್ದ ಆರೋಪಿಗಳ ಪತ್ತೆಗೆ ಪೋಲೀಸರು ಬಲೆ ಬೀಸಿದ್ದು, ಪ್ರಮುಖ ಇಬ್ಬರು ಸೇರಿದಂತೆ ಒಟ್ಟು ಮೂರು ಮಂದಿಯನ್ನು ‌ಬಂಧಿಸಿದ್ದಾರೆ.ಉಳಿದಂತೆ ಘಟನೆಗೆ ಸಂಬಂಧಿಸಿದಂತೆ ಇನ್ನು ಹಲವು ಆರೋಪಿಗಳ ಬಂಧನಕ್ಕೆ ಪೋಲೀಸರು ಮುಂದಾಗಿದ್ದಾರೆ.

- Advertisement -

Latest News

error: Content is protected !!