Monday, June 8, 2026
Homeಕರಾವಳಿಬಂಟ್ವಾಳ: ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿ

ಬಂಟ್ವಾಳ: ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿ

- Advertisement -
- Advertisement -

ಬಂಟ್ವಾಳ: ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿಯಾಗಿ ಗಂಭೀರ ಗಾಯಗೊಂಡ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. ಪುತ್ತೂರು ಬೆಟ್ಟಂಪಾಡಿ ತಲಪ್ಪಾಡಿ ನಿವಾಸಿ ಇಸುಬು ಬ್ಯಾರಿ ಗಾಯಗೊಂಡವರು.

ಪುತ್ತೂರಿನಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಕೆ.ಎಸ್ .ಆರ್.ಟಿ.ಸಿ ಬಸ್ ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದ ಇಸುಬು ಬ್ಯಾರಿ ಗೆ ಡಿಕ್ಕಿ ಹೊಡೆದಿದೆ.ಡಿಕ್ಕಿಯಾದ ರಭಸಕ್ಕೆ ಇಸುಬು ಬ್ಯಾರಿ ನೆಲಕ್ಕೆ ಬಿದ್ದು, ತಲೆಯ ಹಿಂಭಾಗಕ್ಕೆ ಗಂಭೀರ ಗಾಯವಾಗಿದೆ. ತಕ್ಷಣ ಇವರನ್ನು ಮಂಗಳೂರು ಫಾದರ್ ಮುಲ್ಲರ್ ಆಸ್ಪತ್ರೆಗೆ ಸೇರಿಸಲಾಗಿದೆ.  ಚಿಂತಾಜನಕ ಸ್ಥಿತಿಯಲ್ಲಿಯರುವ ಅವರು ತುರ್ತು ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ.

ಇಸುಬು ಬ್ಯಾರಿ ಅವರ ಮಗಳನ್ನು ಬಂಟ್ವಾಳಕ್ಕೆ ಮದುವೆ ಮಾಡಿಕೊಟ್ಟಿದ್ದು, ಮಗಳ ಮನೆಗೆ ಬಂದವರು ಸಂಬಂಧಿಯೊರ್ವರ ಮೆಹಂದಿ ಕಾರ್ಯಕ್ರಮಕ್ಕೆಂದು ಕಲ್ಲಡ್ಕಕ್ಕೆ ಬಂದಿದ್ದರು ಎನ್ನಲಾಗಿದೆ.ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ

- Advertisement -

Latest News

error: Content is protected !!