Monday, June 8, 2026
Homeಕರಾವಳಿಬಂಟ್ವಾಳ:ರಿಕ್ಷಾಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನನ್ನು ವಶಕ್ಕೆ ಪಡೆದ ಪೊಲೀಸರು

ಬಂಟ್ವಾಳ:ರಿಕ್ಷಾಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನನ್ನು ವಶಕ್ಕೆ ಪಡೆದ ಪೊಲೀಸರು

- Advertisement -
- Advertisement -

ಬಂಟ್ವಾಳ: ರಿಕ್ಷಾಕ್ಕೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನನ್ನು ಟ್ರಾಫಿಕ್ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಮೆಲ್ಕಾರ್ ನಲ್ಲಿ ನಡೆದಿದೆ.ಮೊಹಮ್ಮದ್ ಶೇಕ್ ಫೈಝಿಲ್ ಎಂಬಾತ ಆರೋಪಿ.

ಡಿ.5 ರಂದು ಬೆಳಿಗ್ಗೆ 8 ಗಂಟೆಯ ಸುಮಾರಿಗೆ ತಲಪಾಡಿ ಎಂಬಲ್ಲಿ ಬಿಸಿರೋಡಿನಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ರಿಕ್ಷಾಕ್ಕೆ ಹಿಂಬದಿಯಿಂದ ಕಾರೊಂದು ಡಿಕ್ಕಿ ಹೊಡೆದು ಪರಾರಿಯಾಗಿತ್ತು. ಡಿಕ್ಕಿಯಾದ ರಭಸಕ್ಕೆ ರಿಕ್ಷಾ ಪಲ್ಟಿಯಾಗಿ ಚಾಲಕ ಪುರುಷೋತ್ತಮ ಹಾಗೂ ಪ್ರಯಾಣಿಕರಾಗಿದ್ದ ಹೃತಿಕ ಎಂಬರಿಗೆ ಗಾಯವಾಗಿತ್ತು. ಗಾಯಗೊಂಡವರು ಖಾಸಗಿ ಆಸ್ಪತ್ರೆಯಲ್ಲಿ ‌ಚಿಕಿತ್ಸೆ ಪಡೆಯುತ್ತಿದ್ದಾರೆ.

ರಿಕ್ಷಾ ಪಲ್ಟಿಯಾದ ಆರಂಭದಲ್ಲಿ ಘಟನೆಗೆ ಕಾರಣವೇನು ಎಂಬುದು ಅಸ್ಪಷ್ಟವಾಗಿತ್ತು. ಬಳಿಕ ಗಾಯಳುಗಳು ನೀಡಿದ ಮಾಹಿತಿಯಂತೆ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದು ಪರಾರಿಯಾದ ಬಗ್ಗೆ ಮಾಹಿತಿ ಲಭ್ಯವಾಯಿತು.

ಕೂಡಲೇ ಕಾರ್ಯಪ್ರವೃತ್ತರಾದ ಟ್ರಾಫಿಕ್ ಪೊಲೀಸರು ಸ್ಥಳೀಯ ಸಿ.ಸಿ.ಕ್ಯಾಮರಾಗಳನ್ನು ಪರಿಶೀಲನೆ ನಡೆಸಿದಾಗ ಕಾರಿನ ನಂಬರ್ ಲಭ್ಯವಾಗಿದೆ.  ಅದರಂತೆ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

- Advertisement -

Latest News

error: Content is protected !!