Thursday, June 4, 2026
Homeಕರಾವಳಿಲೇಡಿಗೋಷನ್ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿ ಮೃತಪಟ್ಟ ಬಾಣಂತಿ

ಲೇಡಿಗೋಷನ್ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿ ಮೃತಪಟ್ಟ ಬಾಣಂತಿ

- Advertisement -
- Advertisement -

ಮಂಗಳೂರು: ಬಾಣಂತಿಯೋರ್ವರು ಲೇಡಿಗೋಷನ್ ಆಸ್ಪತ್ರೆಯ ನಾಲ್ಕನೇ ಮಹಡಿಯಿಂದ ಹಾರಿ ಮೃತಪಟ್ಟ ಘಟನೆ ನಂ.11 ಸೋಮವಾರದಂದು ಬೆಳಗ್ಗೆ ಸಂಭವಿಸಿದೆ.

ಮೃತಪಟ್ಟವರು ಕಾರ್ಕಳದ ರಂಜಿತಾ (28) ಎನ್ನಲಾಗಿದೆ. 

ಅವರು ಹೆರಿಗೆಗಾಗಿ ಕಾರ್ಕಳ ಆಸ್ಪತ್ರೆಗೆ ದಾಖಲಾಗಿದ್ದು, ನಂತರದಲ್ಲಿ ಹಲವು ಕ್ಲಿಷ್ಟ ಆರೋಗ್ಯ ಸಮಸ್ಯೆಯಿಂದ ಲೇಡಿಗೋಷನ್ ಗೆ ಅ.28 ಕ್ಕೆ ದಾಖಲಿಸಲಾಗಿತ್ತು. ಅವರಿಗೆ ಅ.30 ಕ್ಕೆ ಸಿಸೇರಿಯನ್ ಹೆರಿಗೆಯಾಗಿತ್ತು. ಮಗು ಎನ್ ಐಸಿಯುನಲ್ಲಿತ್ತು. ನ.3 ಕ್ಕೆ ಮಗು ಮೃತಪಟ್ಟಿತ್ತು. ಮಹಿಳೆ ಗುಣಮುಖರಾಗಿ ಸೋಮವಾರ ಡಿಸ್ಚಾರ್ಜ್ ಗೆಂದು ವೈದ್ಯರು ಸೂಚಿಸಿದ್ದರು. ಮನೆಯವರು ಕೂಡ ಸಿದ್ದರಾಗಿ ಬಂದಿದ್ದರು. ಆದರೆ ಮಹಿಳೆ ಏಕಾಏಕಿ ನಾಲ್ಕನೇ ಮಹಡಿಯಿಂದ ಹಾರಿದ್ದಾರೆ.

ಕೂಡಲೇ ಮಹಿಳೆಯನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಆಕೆ ಮೃತಪಟ್ಡಿದ್ದಾರೆಂದು ಆಸ್ಪತ್ರೆಯ ವೈದ್ಯಾಧಿಕಾರಿಯವರು ತಿಳಿಸಿದ್ದಾರೆ.

- Advertisement -

Latest News

error: Content is protected !!