Friday, June 5, 2026
Homeತಾಜಾ ಸುದ್ದಿಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮದರಸಾಗಳನ್ನು ಬಂದ್ ಮಾಡುತ್ತೇವೆ; ಬಿಜೆಪಿ ಶಾಸಕ ಬಸನಗೌಡ...

ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮದರಸಾಗಳನ್ನು ಬಂದ್ ಮಾಡುತ್ತೇವೆ; ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಸ್ಫೋಟಕ ಹೇಳಿಕೆ

- Advertisement -
- Advertisement -

ಬೆಳಗಾವಿ: ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮದರಸಾಗಳನ್ನು ಬಂದ್ ಮಾಡುತ್ತೇವೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಬೆಳಗಾವಿಯಲ್ಲಿ ಶಿವಚರಿತ್ರೆ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಮುಂದಿನ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದರೆ ಅಸ್ಸಾಂ ಸಿಎಂ ಹಿಮಂತ್ ಬಿಸ್ವಾ ಶರ್ಮಾ ರೀತಿ ಕರ್ನಾಟಕದಲ್ಲಿ ಮದರಸಾ ಬಂದ್ ಮಾಡುತ್ತೇವೆ ಎಂದು ಹೇಳಿದ್ದಾರೆ.

ಇವತ್ತು ನಾನು ಬಸನಗೌಡ ಪಾಟೀಲ್ ಯತ್ನಾಳ್ ಆಗಿ ಉಳಿಯಲು ಶಿವಾಜಿ ಮಹಾರಾಜರು ಕಾರಣರಾಗಿದ್ದಾರೆ. ಇಲ್ಲವಾದರೆ ನಾನು ಬಶೀರ್ ಅಹ್ಮದ್ ಪಟೇಲ್ ಆಗಿರುತ್ತಿದ್ದೆ. ಅದೇ ರೀತಿ ಅಭಯ್ ಪಾಟೀಲ್, ಅಜರುದ್ದೀನ್ ಪಟೇಲ್ ಆಗಿ ಇರುತ್ತಿದ್ದರು ಎಂದಿದ್ದಾರೆ.

ಅಸ್ಸಾಂ ಹಿಂದೂಸ್ತಾನ ಬಿಟ್ಟು ಹೋಗುವ ವಾತಾವರಣ ಇತ್ತು. ಆದರೆ ಹಿಮಂತ ಬಿಸ್ವಾ ಶರ್ಮಾರಿಂದ ಅಸ್ಸಾಂನಲ್ಲಿ ಹಿಂದೂಗಳು ಜೀವನ ಮಾಡಲು ಸಾಧ್ಯವಾಯಿತು ಎಂದರು.

- Advertisement -

Latest News

error: Content is protected !!