Thursday, June 4, 2026
Homeತಾಜಾ ಸುದ್ದಿವಿಧಾನ ಪರಿಷತ್ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಬಿಜೆಪಿ ಸೇರ್ಪಡೆ

ವಿಧಾನ ಪರಿಷತ್ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಬಿಜೆಪಿ ಸೇರ್ಪಡೆ

- Advertisement -
- Advertisement -

ಬೆಂಗಳೂರು: ವಿಧಾನ ಪರಿಷತ್ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಇಂದು ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಬೆಂಗಳೂರಿನ ಆರ್.ಟಿ. ನಗರದಲ್ಲಿರುವ ಮುಖ್ಯಮಂತ್ರಿಗಳ ಖಾಸಗಿ ನಿವಾಸದಲ್ಲಿ ಹೊರಟ್ಟಿ ಬಿಜೆಪಿ ಸೇರಿದ್ದಾರೆ. ‌

ಈ ಸಂಧರ್ಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಗೃಹ ಸಚಿವ ಆರಗ ಜ್ಞಾನೇಂದ್ರ ಸೇರಿದಂತೆ ಹಲವರು ಉಪಸ್ಥಿತರಿದ್ದರು‌.

ಸೋಮವಾರ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹೊರಟ್ಟಿ, ನಿನ್ನೆ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ದೇಶದಲ್ಲೇ ಸುದೀರ್ಘ 42 ವರ್ಷಗಳ ಕಾಲ ವಿಧಾನ ಪರಿಷತ್ ಸದಸ್ಯರಾಗಿದ್ದ ದಾಖಲೆಯನ್ನು ಹೊಂದಿರುವ ಬಸವರಾಜ ಹೊರಟ್ಟಿ, ಜೂನ್ ನಲ್ಲಿ ನಡೆಯುವ ವಿಧಾನ ಪರಿಷತ್ ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗುವ ಸಾಧ್ಯತೆ ಇದೆ.

- Advertisement -

Latest News

error: Content is protected !!