Sunday, June 7, 2026
Homeಕರಾವಳಿಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ಆರೋಪ: ಬಜ್ಪೆ ಇನ್ಸ್ಪೆಕ್ಟರ್ ಸಂದೇಶ್ ಪಿಜಿ ಸಹಿತ ಮೂವರ ಅಮಾನತು

ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ ಆರೋಪ: ಬಜ್ಪೆ ಇನ್ಸ್ಪೆಕ್ಟರ್ ಸಂದೇಶ್ ಪಿಜಿ ಸಹಿತ ಮೂವರ ಅಮಾನತು

- Advertisement -
- Advertisement -

ಬಜಪೆ: ಹಿಂದೂ ಸಂಘಟನೆಗಳ ನಾಲ್ವರು ಕಾರ್ಯಕರ್ತರ ಮೇಲೆ  ಬಜಪೆ ಪೊಲೀಸರು ಹಲ್ಲೆ ನಡೆಸಿ ಅವರ ಮನೆಯ ಮಹಿಳೆಯರ ಬಗ್ಗೆ ಅಸಭ್ಯ ಮಾತುಗಳನ್ನಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಬಜ್ಪೆ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ ಸಹಿತ ಮೂವರು ಪೊಲೀಸರನ್ನು ಅಮಾನತು ಗೊಳಿಸಿ ಮಂಗಳೂರು ಪೊಲೀಸ್ ಕಮಿಷನರ್ ಆದೇಶ ಹೊರಡಿಸಿದ್ದಾರೆ.

ಠಾಣೆಯ ಇನ್ಸ್ ಪೆಕ್ಟರ್ ಸಹಿತ ಐವರು ಪೊಲೀಸರನ್ನು ತಕ್ಷಣ ಅಮಾನತುಗೊಳಿಸುದರ ಜೊತೆಗೆ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯಾಗಬೇಕು  ಎಂದು ಆಗ್ರಹಿಸಿ  ಆರೆಸ್ಸೆಸ್  ಹಾಗೂ ಇತರ ಹಿಂದೂ ಪರ  ಸಂಘಟನೆಗಳು ನಿನ್ನೆ ಸಂಜೆ ಬಜಪೆ ಪೊಲೀಸ್ ಠಾಣೆಯ ಮುಂಭಾಗ ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆಯ ನಂತರ ಪೊಲೀಸ್ ಆಯುಕ್ತರು ಹಾಗೂ ವರಿಷ್ಠಾಧಿಕಾರಿಗಳಿಗೆ ಮನವಿಯನ್ನು ನೀಡಿದ್ದರು.

- Advertisement -

Latest News

error: Content is protected !!