Friday, June 5, 2026
HomeUncategorizedಬಂಟ್ವಾಳ: ನಾಪತ್ತೆಯಾಗಿದ್ದ ಸಜೀಪಮೂಡದ ಮಹಿಳೆಯ ಶವ ನೇತ್ರಾವತಿ ನದಿಯಲ್ಲಿ ಪತ್ತೆ

ಬಂಟ್ವಾಳ: ನಾಪತ್ತೆಯಾಗಿದ್ದ ಸಜೀಪಮೂಡದ ಮಹಿಳೆಯ ಶವ ನೇತ್ರಾವತಿ ನದಿಯಲ್ಲಿ ಪತ್ತೆ

- Advertisement -
- Advertisement -

ಬಂಟ್ವಾಳ: ಕೆಲವು ದಿನಗಳ ಹಿಂದೆ ಬಿ.ಸಿ.ರೋಡಿನ ಚಿಕ್ಕಯ್ಯ ಮಠದಲ್ಲಿರುವ ಅಕ್ಕನ ಮನೆಯಿಂದ ನಾಪತ್ತೆಯಾಗಿದ್ದ ಸಜೀಪಮೂಡ ಗ್ರಾಮದ ಸುಭಾಷ್ ನಗರ ನಿವಾಸಿ ಗೋಪಿ ಪೂಜಾರಿ(49) ಅವರ ಮೃತದೇಹ ಸೋಮವಾರ ತುಂಬೆ ಸಮೀಪ ನೇತ್ರಾವತಿ ನದಿಯಲ್ಲಿ ಸೋಮವಾರ ಪತ್ತೆಯಾಗಿದೆ.

ಗೋಪಿ ಪೂಜಾರಿಯವರು ಜು. 11ರಂದು ಬಿ.ಸಿ.ರೋಡಿನ ಚಿಕ್ಕಯ್ಯ ಮಠದಿಂದ ಮುಂಜಾನೆ ನಾಪತ್ತೆಯಾಗಿದ್ದರು. ಬಳಿಕ ಪಾಣೆಮಂಗಳೂರು ಸೇತುವೆಯ ಸಮೀಪ ಮಹಿಳೆಯ ಶಾಲು ಹಾಗೂ ಬಳೆ ಪತ್ತೆಯಾದ ಹಿನ್ನೆಲೆಯಲ್ಲಿ ನದಿಗೆ ಹಾರಿದ್ದಾರೆ ಎಂದು ಹುಡುಕಾಟ ನಡೆಸಲಾಗಿತ್ತು ಆದರೂ ಮಹಿಳೆಯ ಸುಳಿವು ಸಿಕ್ಕಿರಲಿಲ್ಲ ಇಂದು ತುಂಬೆ ಸಮೀಪ ನದಿಯಲ್ಲಿ ಶವ ಪತ್ತೆಯಾಗಿದೆ.

- Advertisement -

Latest News

error: Content is protected !!