Wednesday, June 24, 2026
HomeWorldಬಿಸಿಸಿಐಯಿಂದ ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಣೆ

ಬಿಸಿಸಿಐಯಿಂದ ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಣೆ

- Advertisement -
- Advertisement -

ಹೊಸದಿಲ್ಲಿ: ದಕ್ಷಿಣ ಆಫ್ರಿಕಾ ವಿರುದ್ಧ ಫೈನಲ್ ಸಮರ ಜಯಿಸಿ ಎರಡನೇ ಬಾರಿಗೆ T20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಬಿಸಿಸಿಐ ಭರ್ಜರಿ ಬಹುಮಾನ ಘೋಷಿಸಿದೆ.

https://x.com/JayShah/status/1807415146760818693?

ಬಿಸಿಸಿಐ ಕಾರ್ಯದರ್ಶಿ ಮತ್ತು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ ಜಯ್ ಶಾ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿ, ”ಐಸಿಸಿ ಪುರುಷರ T20 ವಿಶ್ವಕಪ್ ಗೆದ್ದ ಟೀಮ್ ಇಂಡಿಯಾಗೆ 125 ಕೋಟಿ ರೂ.ಗಳ ಬಹುಮಾನವನ್ನು ಘೋಷಿಸಲು ನನಗೆ ಸಂತೋಷವಾಗುತ್ತಿದೆ. ತಂಡವು ಪಂದ್ಯಾವಳಿಯ ಉದ್ದಕ್ಕೂ ಅಸಾಧಾರಣ ಪ್ರತಿಭೆ, ದೃಢತೆ ಮತ್ತು ಕ್ರೀಡಾ ಮನೋಭಾವವನ್ನು ಪ್ರದರ್ಶಿಸಿದೆ. ಈ ಅತ್ಯುತ್ತಮ ಸಾಧನೆಗಾಗಿ ಎಲ್ಲಾ ಆಟಗಾರರು, ತರಬೇತುದಾರರು ಮತ್ತು ಸಹಾಯಕ ಸಿಬಂದಿಗೆ ಅಭಿನಂದನೆಗಳು” ಎಂದು ಪೋಸ್ಟ್ ಮಾಡಿದ್ದಾರೆ.

- Advertisement -

Latest News

error: Content is protected !!