ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಆಯೋಜಿಸಿದ್ದ `ಚಾಂಪಿಯನ್ಸ್ ಟ್ರೋಫಿ 2025’ರಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದ ಟೀಮ್ ಇಂಡಿಯಾಗೆ ಬಿಸಿಸಿಐ ಭರ್ಜರಿ ಉಡುಗೊರೆ ನೀಡಿದೆ.
ಬರೋಬ್ಬರಿ 58 ಕೋಟಿ ರೂ. ಬೃಹತ್ ನಗದು ಬಹುಮಾನವನ್ನು ಘೋಷಿಸಿದೆ.
ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡವು ಫೈನಲ್ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡವನ್ನು ಬಗ್ಗು ಬಡಿದು ಟ್ರೋಫಿ ಮುಡಿಗೇರಿಸಿಕೊಂಡಿತ್ತು. ಈ ಶ್ರೇಷ್ಠ ಸಾಧನೆಯನ್ನು ಗೌರವಿಸುವ ಸಲುವಾಗಿ ಇದೀಗ 58 ಕೋಟಿ ರೂ. ನಗದು ಬಹುಮಾನ ಘೋಷಿಸಲಾಗಿದ್ದು, ಈ ಮೊತ್ತವನ್ನು ಆಟಗಾರರು, ತರಬೇತಿ ಮತ್ತು ಸಹಾಯಕ ಸಿಬ್ಬಂದಿಗಳು ಹಂಚಿಕೊಳ್ಳಲಿದ್ದಾರೆ ಎನ್ನಲಾಗಿದೆ.
ತಂಡದಲ್ಲಿ ರೋಹಿತ್ ಶರ್ಮಾ (ನಾಯಕ), ಶುಭ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರಿಷಭ್ ಪಂತ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಮೊಹಮ್ಮದ್. ಶಮಿ, ಅರ್ಷದೀಪ್ ಸಿಂಗ್, ರವೀಂದ್ರ ಜಡೇಜಾ, ವರುಣ್ ಚಕ್ರವರ್ತಿ ಇದ್ದರು.