Thursday, June 4, 2026
Homeಕ್ರೀಡೆನಿವೃತ್ತಿ ಘೋಷಿಸಿದ ಕೆಲ ತಿಂಗಳ ಬಳಿಕ ಧೋನಿಗೆ ಧನ್ಯವಾದ ಹೇಳಿದ ಬಿಸಿಸಿಐ

ನಿವೃತ್ತಿ ಘೋಷಿಸಿದ ಕೆಲ ತಿಂಗಳ ಬಳಿಕ ಧೋನಿಗೆ ಧನ್ಯವಾದ ಹೇಳಿದ ಬಿಸಿಸಿಐ

- Advertisement -
- Advertisement -

ಮುಂಬೈ: ಅಂತಾರಾಷ್ಟ್ರೀಯ ಕ್ರಿಕೆಟ್‍ಗೆ ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ನಿವೃತ್ತಿ ಘೋಷಿಸಿದ ಕೆಲ ತಿಂಗಳ ಬಳಿಕ ಬಿಸಿಸಿಐ ಧೋನಿ ಅವರಿಗೆ ಧನ್ಯವಾದ ತಿಳಿಸಿದೆ.

ಧೋನಿ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿ ಜೀವನಕ್ಕೆ ಆಗಸ್ಟ್ 15 ರಂದು ನಿವೃತ್ತಿ ಘೋಷಣೆ ಮಾಡಿದ್ದರು. ಆ ಬಳಿಕ ಐಪಿಎಲ್ ಟೂರ್ನಿಯಲ್ಲಿ ಮುಂದುವರಿದಿದ್ದರು. ಸದ್ಯ ಧೋನಿ ನಿವೃತ್ತಿಯ ಬಳಿಕ ಟೀಂ ಇಂಡಿಯಾ ಮೊದಲ ಟೂರ್ನಿಯನ್ನು ಆಡಲಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಆಸ್ಟ್ರೇಲಿಯಾ ವಿರುದ್ಧದ ಸರಣಿಗೆ ಆಟಗಾರರನ್ನು ಆಯ್ಕೆ ಮಾಡಿರುವ ಬಿಸಿಸಿಐ, ಟೀಂ ಇಂಡಿಯಾ ಲೆಜೆಂಡ್ ಆಟಗಾರನಿಗೆ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಫೋಟೋ ಫೋಸ್ಟ್ ಮಾಡುವ ಮೂಲಕ ಗೌರವ ಸಲ್ಲಿಸಿದೆ.

- Advertisement -

Latest News

error: Content is protected !!