Sunday, June 7, 2026
Homeಕರಾವಳಿಬಂಟ್ವಾಳ; ತೀವ್ರ ಜ್ವರಕ್ಕೆ ಅಂತಿಮ ಬಿಕಾಂ ವಿದ್ಯಾರ್ಥಿನಿ  ಬಲಿ

ಬಂಟ್ವಾಳ; ತೀವ್ರ ಜ್ವರಕ್ಕೆ ಅಂತಿಮ ಬಿಕಾಂ ವಿದ್ಯಾರ್ಥಿನಿ  ಬಲಿ

- Advertisement -
- Advertisement -

ಬಂಟ್ವಾಳ: ತೀವ್ರ ಜ್ವರದಿಂದ ಬಳಲುತ್ತಿದ್ದ ಅಂತಿಮ ಬಿಕಾಂ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಬಂಟ್ವಾಳದಲ್ಲಿ ನಡೆದಿದೆ.

ಅಮ್ಟಾಡಿ ನಿವಾಸಿ ಲೋಕೇಶ್ ಅವರ ಪುತ್ರಿ ಕವಿತಾ ( 20) ಮೃತಪಟ್ಟ ವಿದ್ಯಾರ್ಥಿನಿ. ಕವಿತಾ ಕಳೆದ ಮೂರು ದಿನಗಳಿಂದ ಜ್ವರದಿಂದ ಬಳಲುತ್ತಿದ್ದು, ಸೆ. 6ರ ಮಂಗಳವಾರ ಜ್ವರ ಉಲ್ಬಣಗೊಂಡ ಹಿನ್ನೆಲೆಯಲ್ಲಿ ತುಂಬೆ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆ ಕರೆದೊಯ್ಯಲಾಯಿತು. ಅಲ್ಲಿಂದ ಹೆಚ್ಚಿನ ಚಿಕಿತ್ಸೆಗಾಗಿ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕವಿತಾ ಅವರು ಚಿಕಿತ್ಸೆ ಫಲಕಾರಿಯಾಗದೆ ಸೆ.7ರಂದು ಕೊನೆಯುಸಿರೆಳೆದಿದ್ದಾಳೆ.

ಕವಿತಾ ಸಿದ್ದಕಟ್ಟೆ ಕಾಲೇಜಿನ ಅಂತಿಮ ಬಿಕಾಂ ವಿದ್ಯಾರ್ಥಿನಿಯಾಗಿದ್ದು, ಕಲಿಕೆಯಲ್ಲಿ ಮುಂದಿದ್ದಳು. ಸೆ.12ರಂದು ಪರೀಕ್ಷೆ ನಡೆಯಲಿದ್ಸು, ಇದರ ತಯಾರಿಯಲ್ಲಿದ್ದಳು ಎನ್ನಲಾಗಿದೆ.

- Advertisement -

Latest News

error: Content is protected !!