- Advertisement -
![]()
- Advertisement -
ಮಂಗಳೂರು: ಉಚ್ಚಿಲ ಸಮೀಪದ ಬೀಚ್ ರೆಸಾರ್ಟ್ ನಲ್ಲಿ ಈಜುಕೊಳದಲ್ಲಿ ಮುಳುಗಿ ಮೂವರು ಯುವತಿಯರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ರೆಸಾರ್ಟ್ ಮಾಲೀಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ರೆಸಾರ್ಟ್ ಮಾಲೀಕ ಮನೋಹರ್ ಪುತ್ರನ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದು, ಉಚ್ಚಿಲದ ಸಾಯಿರಾಂ ವಾಝ್ಕೋ ರೆಸಾರ್ಟ್‌ನಲ್ಲಿ ಇಂದು ಬೆಳಗ್ಗೆ ದುರ್ಘಟನೆ ನಡೆದಿತ್ತು.
ಘಟನಾ ಸ್ಥಳಕ್ಕೆ ಮಂಗಳೂರು ಎಸಿ ಹರ್ಷವರ್ಧನ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೀಚ್ ರೆಸಾರ್ಟ್ ನ ಪರವಾನಗಿಯನ್ನು ತಾತ್ಕಾಲಿಕವಾಗಿ ರದ್ದು ಮಾಡಿ
ತನಿಖೆ ಮುಗಿಯುವವರೆಗೂ ರೆಸಾರ್ಟ್ ಸೀಲ್ ಡೌನ್ ಮಾಡಲು ತೀರ್ಮಾನಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಶುಕ್ರವಾರ ಸಂಜೆ ಮೈಸೂರಿನಿಂದ ಹೊರಟಿದ್ದ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿನಿಯರು ನಿನ್ನೆ ಬೆಳಗ್ಗೆ ಉಚ್ಚಿಲದ ಬೀಚ್ ರೆಸಾರ್ಟ್ ಗೆ ಆಗಮಿಸಿದ್ದು, ಇಂದು ಬೆಳಗ್ಗೆ ಈಜುಕೊಳದಲ್ಲಿ ಈಜಲು ತೆರಳಿದ್ದಾಗ ಮುಳುಗಿ ಸಾವನ್ನಪ್ಪಿದ್ದರು.
- Advertisement -


