ಉಡುಪಿ: ಐದು ವರ್ಷದ ಬಾಲಕಿಗೆ ಭಿಕ್ಷೆ ಬೇಡುತ್ತಿದ್ದ ಯುವಕನೊಬ್ಬ ಲೈಂಗಿಕ ಕಿರುಕುಳ ನೀಡಿದ ಘಟನೆ ಉಡುಪಿ ನಗರದ ಪಿಪಿಸಿ ಸಮೀಪದ ಓಣಿಯಲ್ಲಿ ಗುರುವಾರ ಮಧ್ಯಾಹ್ನ ವೇಳೆ ನಡೆದಿದೆ. ಯುವಕನ ಚಲನವನ ಪಕ್ಕದಲ್ಲಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.ಈ ಬಗ್ಗೆ ಬಾಲಕಿಯ ಪೋಷಕರು ನೀಡಿದ ದೂರಿನಂತೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುಮಾರು 30 ವರ್ಷದ ಯುವಕ ಮತ್ತೋರ್ವ ಬಾಲಕಿ ಜೊತೆ ಓಡಾಡುತ್ತಿದ್ದ ಸಂತ್ರಸ್ತ ಬಾಲಕಿಗೆ ಚಾಕಲೇಟ್ ಆಸೆ ತೋರಿಸಿ, ಅಂಗಡಿ ಪಕ್ಕದ ಕಾಲುದಾರಿಯಲ್ಲಿ ಕರೆದುಕೊಂಡು ಹೋಗಿ ದಾರಿ ಬದಿಯ ಬೇಲಿ ಪಕ್ಕದಲ್ಲಿ ಲೈಂಗಿಕ ಕಿರುಕುಳ ನೀಡಲು ಮುಂದಾಗಿದ್ದಾನೆ, ಬಾಲಕಿಯನ್ನು ಹುಡುಕಿಕೊಂಡು ಬಂದ ಇನ್ನೋರ್ವ ಬಾಲಕಿಯನ್ನು ಕಂಡು ಪರಾರಿಯಾಗಿದ್ದಾನೆ.
ಆತ ಲೈಂಗಿಕ ಕಿರುಕುಳ ನೀಡಿದ್ದ ಬಗ್ಗೆ ಪೋಷಕರಲ್ಲಿ ತಿಳಿಸಿದ್ದು, ಆ ಬಗ್ಗೆ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಆರೋಪಿಯ ಶೋಧ ಕಾರ್ಯದಲ್ಲಿದ್ದಾರೆ. ಈ ಪ್ರಕರಣದ ಕುರಿತು ತ್ವರಿತ ಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೂಚನೆ ನೀಡಿದ್ದಾರೆ. ಅಪಘಾತದಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಘಟನೆಯ ಮಾಹಿತಿ ಬಂದ ತಕ್ಷಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಜೊತೆ ಮಾತನಾಡಿ ಘಟನೆಯ ವಿವರ ಪಡೆದಿದ್ದಾರೆ.ಆರೋಪಿಯ ಬಗ್ಗೆ ಮಾಹಿತಿಗೆ ಮನವಿ ಬಾಲಕಿಯ ಲೈಂಗಿಕ ಕಿರುಕುಳ ಪ್ರಕರಣದ ಶಂಕಿತ ಆರೋಪಿಯ ಫೋಟೋ ಸ್ಥಳೀಯ ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾಗಿದ್ದು ಈತನ ಬಗ್ಗೆ ಸಾರ್ವಜನಿಕರು ಯಾವುದೇ ಮಾಹಿತಿಯಿದ್ದಲ್ಲಿ ಉಡುಪಿ ಮಹಿಳಾ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಕೋರಲಾಗಿದೆ.
ಕಂಟ್ರೋಲ್ ರೂಮ್ : 9480805400


