Thursday, June 4, 2026
Homeತಾಜಾ ಸುದ್ದಿಬೆಳಗಾವಿ ಲೋಕಸಭಾ ಉಪಚುನಾವಣೆಯ ಫಲಿತಾಂಶ ಪ್ರಕಟ

ಬೆಳಗಾವಿ ಲೋಕಸಭಾ ಉಪಚುನಾವಣೆಯ ಫಲಿತಾಂಶ ಪ್ರಕಟ

- Advertisement -
- Advertisement -

ಬೆಳಗಾವಿ ಲೋಕಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಸಂಪೂರ್ಣವಾಗಿದ್ದು, ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕೇಂದ್ರದ ಮಾಜಿ ಸಚಿವ ದಿ. ಸುರೇಶ್​ ಅಂಗಡಿ ಪತ್ನಿ ಮಂಗಲಾ ಅಂಗಡಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್​ ಅಭ್ಯರ್ಥಿ ಸತೀಶ್​ ಜಾರಕಿಹೊಳಿ ಸೋಲುಂಡಿದ್ದಾರೆ.

ಆರಂಭದಿಂದಲೂ ಕ್ಲೈಮಾಕ್ಸ್​ ಹಂತದವರೆಗೂ ಹಾವು ಏಣಿಯಂತಿದ್ದ ಮತ ಗಳಿಕೆ, ಕ್ಷಣಕ್ಷಣಕ್ಕೂ ರೋಚಕ ತಿರುವು ಪಡೆಯುತ್ತಲೇ ಇತ್ತು. ಅಂತಿಮವಾಗಿ ಮಂಗಲಾ 2912 ಮತಗಳ ಅಂತರದಲ್ಲಿ ಗೆದ್ದು ಬೀಗಿದ್ದಾರೆ.

ಬಿಜೆಪಿಯ ಭದ್ರಕೋಟೆಯಲ್ಲಿಯೇ ಕೇವಲ 3 ಸಾವಿರ ಮತಗಳಿಂದ ಗೆಲುವಾಗಿರುವುದು ನಾಯಕರುಗಳಿಗೆ ಕೊಂಚ ಬೇಸರ ತರಿಸಿದೆ. ಯಾಕಂದ್ರೆ ಈ ಹಿಂದೆ ಸುರೇಶ್ ಅಂಗಡಿ ಅವರು ನಾಲ್ಕು ಬಾರಿ ಗೆಲುವು ಸಾಧಿಸಿದ್ದರು.

ಕಳೆದ ಲೋಕಸಭಾ ಚುನಾವನೆಯಲ್ಲಿ ಸುರೇಶ್ ಅಂಗಡಿ ಅವರು 3 ಲಕ್ಷದ ತೊಂಭತ್ತು ಸಾವಿರುದ ಮತಗಳಿಂದ ಗೆದ್ದದ್ದರು. ಈಗ ಸುರೇಶ್ ಅಂಗಡಿ ಅವರ ಪತ್ನಿ ಮಂಗಳ ಅಂಗಡಿ ಅವರು ಕೇವಲ 3000 ಸಾವಿರ ಅಂತರದಿಂದ ಗೆಲುವಿನ ನಗೆ ಬೀರಿದ್ದಾರೆ. ಚುನಾವಣೆ ಆಯೋಗ ಅಧಿಕೃತ ಘೋಷಣೆಯೊಂದೆ ಬಾಕಿ ಇದೆ.

- Advertisement -

Latest News

error: Content is protected !!