- Advertisement -
- Advertisement -
ಉಡುಪಿ: ಕಾಪು ತಾಲೂಕಿನ ಪಣಿಯೂರಿನ ಬೆಳಪು ವ್ಯವಸಾಯ ಸಹಕಾರ ಸಂಘದ ಅಮೃತ ಮಹೋತ್ಸವ ಸಂಭ್ರಮಾಚರಣೆ ಹಾಗೂ ಸಹಕಾರಿ ಮಹಲ್ ಉದ್ಘಾಟನೆ ಇಂದು ನಡೆಯಿತು.
ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಮತ್ತು ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಸಹಕಾರಿ ಮಹಲ್ ಉದ್ಘಾಟಿಸಿದರು.
ಈ ವೇಳೆ ರಾಜ್ಯ ಸಹಕಾರ ಮಾರಾಟ ಮಹಾಮಂಡಳದ ಅಧ್ಯಕ್ಷ ಡಾ.ಎಂ.ಎನ್. ರಾಜೇಂದ್ರ ಕುಮಾರ್, ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ನಬಾರ್ಡ್ ಮುಖ್ಯ ಮಹಾ ಪ್ರಬಂಧಕ ಟಿ.ರಮೇಶ್, ಬೆಳಪು ವ್ಯವಸಾಯ ಸಹಕಾರಿ ಸಂಘದ ಅಧ್ಯಕ್ಷ ಡಾ.ದೇವಿ ಪ್ರಸಾದ್ ಶೆಟ್ಟಿ ಬೆಳಪು ಸೇರಿದಂತೆ ಹಲವು ಮಂದಿ ಉಪಸ್ಥಿತರಿದ್ದರು.ಇದೇ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಸಮಾರಂಭದಲ್ಲಿ ಸನ್ಮಾನಿಸಲಾಯಿತು.
- Advertisement -