Sunday, April 28, 2024
Homeಕರಾವಳಿಸುಳ್ಯ; ಬೆಳ್ಳಾರೆಯಲ್ಲಿ ನೂತನ ಪೊಲೀಸ್ ಠಾಣೆ ಉದ್ಘಾಟನೆ

ಸುಳ್ಯ; ಬೆಳ್ಳಾರೆಯಲ್ಲಿ ನೂತನ ಪೊಲೀಸ್ ಠಾಣೆ ಉದ್ಘಾಟನೆ

spot_img
- Advertisement -
- Advertisement -

ಸುಳ್ಯ: ಬೆಳ್ಳಾರೆಯಲ್ಲಿ ನೂತನವಾಗಿ ನಿರ್ಮಿಸಿದ ಪೊಲೀಸ್ ಠಾಣೆಯನ್ನು  ಉದ್ಘಾಟನೆ ಬಂದರು, ಮೀನುಗಾರಿಕೆ ಮತ್ತು ಒಳನಾಡು ಜಲ ಸಾರಿಗೆ ಇಲಾಖೆ ಸಚಿವ ಎಸ್. ಅಂಗಾರ ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ಅವರು ವಿದ್ಯಾವಂತರ ಪ್ರಮಾಣ ಹೆಚ್ಚುತ್ತಿದ್ದರೂ ಸಮಾಜದಲ್ಲಿ ಅಪರಾಧ ಪ್ರಕರಣಗಳು ಏರಿಕೆ ಕಂಡಿರುವುದು ದುರದೃಷ್ಟಕರ ಎಂದು ಹೇಳಿದ್ದಾರೆ.ಹಿಂದಿನ ಕಾಲದಲ್ಲಿ ಅಪರಾಧ ಪ್ರಕರಣಗಳು ಕಡಿಮೆ ಆಗುತ್ತಿತ್ತು, ಪೊಲೀಸ್ ಠಾಣೆಗಳು ಕಡಿಮೆ ಇತ್ತು. ಸಮಾಜದಲ್ಲಿ ಅಪರಾಧ ಪ್ರಕರಣಗಳು ಕಡಿಮೆ ಆಗಬೇಕಾದರೆ ಜನರು ಪರಿವರ್ತನೆಯಾಗಬೇಕು. ಜನರಲ್ಲಿನ ಭಾವನೆಗಳು ಬದಲಾಗಬೇಕು. ಸರಕಾರ, ಕಾನೂನಿಂದ ಮಾತ್ರ ಸಮಾಜದಲ್ಲಿ ಬದಲಾವಣೆ ಸಾಧ್ಯವಿಲ್ಲ, ಮಾನವೀಯತೆ, ಕರುಣೆ ಬೆಳೆಸಿಕೊಳ್ಳಬೇಕು, ಆಗ ಕ್ರೌರ್ಯ, ದ್ವೇಷ ನಶಿಸಿ ಅನಾಹುತಗಳು ಕಡಿಮೆಯಾಗುತ್ತದೆ. ಸಮಾಜದಲ್ಲಿ ಶಾಂತಿ, ಸೌಹಾರ್ದತೆ ನೆಲೆಸುತ್ತದೆ ಎಂದು ಹೇಳಿದರು.

ದ.ಕ. ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ವಿಕ್ರಮ್ ಅಮಟೆ  ಪ್ರಸ್ತಾವಿಕ ಮಾತುಗಳನ್ನು ಆಡಿದರು. ಇನ್ನು ಕಾರ್ಯಕ್ರಮದಲ್ಲಿ

ಬೆಳ್ಳಾರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಚಂದ್ರಶೇಖರ ಪನ್ನೆ, ಸುಳ್ಯ ಪ್ರಭಾರ ತಹಸೀಲ್ದಾರ್ ಮಂಜುನಾಥ, ಸುಳ್ಯ ವೃತ್ತ ನಿರೀಕ್ಷಕ ರವೀಂದ್ರ ಸಿ. ಎಂ ವೇದಿಕೆಯಲ್ಲಿ ಉಪಸ್ಥಿತರಿದ್ದರು. ದ.ಕ. ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ವಿಕ್ರಮ್ ಅಮಟೆ ಸ್ವಾಗತಿಸಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಧರ್ಮಪ್ಪ ಎನ್. ಎಂ. ವಂದಿಸಿದರು. ಗಾಯತ್ರಿ ಪ್ರಾರ್ಥಿಸಿದರು. ನಿವೃತ್ತ ಎಎಸ್‍ಐ ಭಾಸ್ಕರ ಅಡ್ಕಾರ್ ಕಾರ್ಯಕ್ರಮ ನಿರೂಪಿಸಿದರು. ಬೆಳ್ಳಾರೆ ಉಪನಿರೀಕ್ಷರಾದ ಸುಹಾಸ್ ಆರ್, ಶಿವಕುಮಾರ್, ಸುಳ್ಯ ಎಸ್‍ಐ ದಿಲೀಪ್ ಜಿ.ಆರ್, ಸುಬ್ರಹ್ಮಣ್ಯ ಎಸ್‍ಐ ಮಂಜುನಾಥ್ ಹಾಗು ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!