Monday, June 8, 2026
Homeಕರಾವಳಿಬೆಳ್ತಂಗಡಿ : ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ...

ಬೆಳ್ತಂಗಡಿ : ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಮರುತನಿಖೆಗೆ ಸಿಎಂ ಗೆ ಮನವಿ

- Advertisement -
- Advertisement -

ಬೆಳ್ತಂಗಡಿ : ಧರ್ಮಸ್ಥಳದ ಸೌಜನ್ಯ ಕೊಲೆ ಪ್ರಕರಣ ಸಿಬಿಐ ವಿಶೇಷ ನ್ಯಾಯಾಲಯ ಶಂಕಿತ ಆರೋಪಿ ಸಂತೋಷ್ ರಾವ್ ನನ್ನು ದೋಷಮುಕ್ತ ಮಾಡಿದ್ದು. ಇದರಿಂದ ನೈಜ ಆರೋಪಿ ಪತ್ತೆಯಾಗದೆ ಸೌಜನ್ಯ ಕುಟುಂಬಕ್ಕೆ ನ್ಯಾಯ ಇನ್ನೂ ಸಿಕ್ಕಿಲ್ಲ ಮತ್ತೆ ಉನ್ನತ್ತ ಮಟ್ಟದ ಮರುತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಂಡು ಸೌಜನ್ಯ ಕುಟುಂಬಕ್ಕೆ ನ್ಯಾಯ ಒದಗಿಸಲು ಜುಲೈ 31 ರಂದು ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯನವರ ಕಚೇರಿಗೆ ತೆರಳಿ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗ ಸೇವಾ ಸಂಘದಿಂದ ಮನವಿ ಮಾಡಿಕೊಳ್ಳಲಾಯಿತು‌.

ಸಿಎಂ ಸಿದ್ದರಾಮಯ್ಯ ಭೇಟಿ ವೇಳೆ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗೆ ಸೇವಾ ಸಂಘದ ಗೌರವಾಧ್ಯಕ್ಷ ಹೆಚ್.ಪದ್ಮಗೌಡ,ಅಧ್ಯಕ್ಷ ಪಿ.ಕುಶಾಲಪ್ಪ ಗೌಡ ಪೂವಾಜೆ, ಉಪಾಧ್ಯಕ್ಷ ನಾರಾಯಣ ಗೌಡ ದೇವಸ್ಯ, ಕೃಷ್ಣಪ್ಪ ಗೌಡ ಸವಣಾಲು, ಕಾರ್ಯದರ್ಶಿ ಶ್ರೀನಾಥ್ ಕೆ.ಎನ್.ನಡ , ಗಣೇಶ್ ಗೌಡ ಕಡಿರುದ್ಯಾವರ, ನಿರ್ದೇಶಕರಾದ ಧರ್ಣಪ್ಪ ಗೌಡ ಬಾನಡ್ಕ, ವಿಜಯ ಗೌಡ ನ್ಯಾಯತರ್ಪು, ಯುವರಾಜ್ ಅನಾರು, ಹರೀಶ್ ಗೌಡ ಪರಪ್ಪಾಜೆ , ರವೀಂದ್ರನಾಥ ಗೌಡ ಕೊಯ್ಯೂರು, ಸದಸ್ಯರಾದ ಮಾಧವ ಗೌಡ, ನಿತಿನ್ ಕಲ್ಮಂಜ , ತೀಕ್ಷಿತ್ ಮಲವಂತಿಗೆ ಜೊತೆಯಲ್ಲಿದ್ದರು.

- Advertisement -

Latest News

error: Content is protected !!