- Advertisement -
- Advertisement -
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪಂಚಾಯತ್ ಕಟ್ಟಡ ಉದ್ಘಾಟನೆಗೊಂಡಿದೆ. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮತ್ತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಟ್ಟಡವನ್ನು ಉದ್ಘಾಟಿಸಿದರು.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಮಾಜಿ ಶಾಸಕ. ವಸಂತ ಬಂಗೇರ ಉದ್ಘಾಟನಾ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.ಇದೇ ವೇಳೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಸಚಿವ ದಿನೇಶ್ ಗುಂಡೂರಾವ್ ಅವರು ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಆನಂದ್ .ಕೆ, ಪುತ್ತೂರು ಎಸಿ ಗಿರೀಶ್ ನಂದನ್, ಬೆಳ್ತಂಗಡಿ ತಹಸೀಲ್ದಾರ್ ಸುರೇಶ್ ಕುಮಾರ್, ಬೆಳ್ತಂಗಡಿ ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಕುಸುಮಾಧರ ಬಿ., ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರ ಆರ್. ವೇಣುಗೋಪಾಲ್ ಉಪಸ್ಥಿತರಿದ್ದರು.
- Advertisement -