Monday, August 10, 2026
Homeಕರಾವಳಿಮಂಗಳೂರುಬೆಳ್ತಂಗಡಿ : ವೇಣೂರಿನಲ್ಲಿ ಮಾದಕ ವಸ್ತು ಸೇವನೆ ಮಾಡಿದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

ಬೆಳ್ತಂಗಡಿ : ವೇಣೂರಿನಲ್ಲಿ ಮಾದಕ ವಸ್ತು ಸೇವನೆ ಮಾಡಿದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

- Advertisement -
- Advertisement -

ಬೆಳ್ತಂಗಡಿ: ಮಾದಕವಸ್ತು ವಿರುದ್ಧ ಬೆಳ್ತಂಗಡಿ ಉಪವಿಭಾಗ  ಪೊಲೀಸರ ಕಾರ್ಯಾಚರಣೆ ಚುರುಕುಗೊಳಿಸಿದ್ದು, ಇದೀಗ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ಮೇಲಿನ ಪೇಟೆಯಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಸೇವಿಸಿದ್ದ ವ್ಯಕ್ತಿಯೊಬ್ಬನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ವೇಣೂರು ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಅಕ್ಷಯ ಡವಗಿ ಅವರು ಠಾಣಾ ಸಿಬ್ಬಂದಿಗಳೊಂದಿಗೆ ಆ.9ರಂದು ಮಧ್ಯಾಹ್ನ ರೌಂಡ್ಸ್ ಕರ್ತವ್ಯದಲ್ಲಿದ್ದ ವೇಳೆ ವೇಣೂರು ಮೇಲಿನ ಪೇಟೆ ಪ್ರದೇಶದಲ್ಲಿ ವ್ಯಕ್ತಿಯೊಬ್ಬರು ಅಮಲಿನಲ್ಲಿರುವುದು ಕಂಡುಬಂದಿದೆ.ವಿಚಾರಣೆ ನಡೆಸಿದಾಗ ಆತ ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮದ ನಿವಾಸಿ ಮಹಮ್ಮದ್ ಆಸೀಫ್ (35) ಎಂದು ತಿಳಿದುಬಂದಿದ್ದು, ನಿಷೇಧಿತ ಮಾದಕ ವಸ್ತು ಸೇವಿಸಿರುವುದಾಗಿ ಒಪ್ಪಿಕೊಂಡಿದ್ದಾನೆ.

ಬಳಿಕ ಆತನನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಮಾದಕ ವಸ್ತು ಸೇವಿಸಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಈ ಸಂಬಂಧ ವೇಣೂರು ಪೊಲೀಸ್ ಠಾಣೆಯಲ್ಲಿ ಕಲಂ 27(b) ಮತ್ತು 22(a) ಎನ್‌ಡಿಪಿಎಸ್ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!