Friday, June 5, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ರಾಜೀನಾಮೆಗೆ ಒತ್ತಾಯ

ಬೆಳ್ತಂಗಡಿ : ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ರಾಜೀನಾಮೆಗೆ ಒತ್ತಾಯ

- Advertisement -
- Advertisement -

ಬೆಳ್ತಂಗಡಿ : ಲೋಕಸಭಾ ಚುನಾವಣೆಯಲ್ಲಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲು ಅನುಭವಿಸಿದ ಹಿನ್ನೆಲೆ ಸೋಲಿನ ಹೊಣೆ ಹೊತ್ತು  ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ರಾಜೀನಾಮೆ ಸಲ್ಲಿಸಬೇಕು ಎಂಬ ಆಗ್ರಹ ಕೇಳಿ ಬಂದಿದೆ.

ಸಾಮಾಜಿಕ ಜಾಲತಾಣಗಳಲ್ಲಿ ‘ಜಿಲ್ಲಾಧ್ಯಕ್ಷರನ್ನು ಬದಲಾಯಿಸಿ ಕಾಂಗ್ರೆಸ್ ಉಳಿಸಿ’ ಎಂಬ ಅಭಿಯಾನ ಶುರುವಾಗಿದೆ.ಹರೀಶ್ ಎಮ್.ಎಲ್.ಸಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿದ್ದಾರೆ ಎರಡು ಭಾರಿ ಲೋಕಸಭಾ ಚುನಾವಣೆ ಮತ್ತು ಎರಡು ಬಾರಿ ವಿಧಾನಸಭಾ ಚುನಾವಣೆ ವೇಳೆ ಜಿಲ್ಲಾಧ್ಯಕ್ಷರಾಗಿದ್ದರು. ಇದೀಗ ಅವರ ರಾಜೀನಾಮೆಗೆ ಆಗ್ರಹ ಜೋರಾಗಿದೆ.

 ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸಾಮಾಜಿಕ ಜಾಲತಾಣಗಳಲ್ಲಿ ರಾಜೀನಾಮೆ ನೀಡುವಂತೆ ಆಕ್ರೋಶ ಹೊರಹಾಕುತ್ತಿದ್ದಾರೆ.

ಇನ್ನೂ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶಕ್ಕೆ‌ ಮಣಿದು ರಾಜಿನಾಮೆ ಸಲ್ಲಿಸುತ್ತಾರಾ ಎಂದು ಕಾದು ನೋಡಬೇಕಾಗಿದೆ.

- Advertisement -

Latest News

error: Content is protected !!