- Advertisement -
- Advertisement -
ಬೆಳ್ತಂಗಡಿ: ಸ್ಥಳೀಯ ಸರಕಾರಿ ತಾಲೂಕು ಆಸ್ಪತ್ರೆಯಲ್ಲಿ ಕಳೆದ ಒಂದು ವರ್ಷದಿಂದ ಸರ್ಜನ್ (ಶಲ್ಯ ವೈದ್ಯ) ಆಗಿ ಸೇವೆ ಸಲ್ಲಿಸುತ್ತಿದ್ದ ಡಾ. ರಾಘವೇಂದ್ರ ಅವರು ಇದೀಗ ವರ್ಗಾವಣೆಗೊಂಡಿದ್ದಾರೆ.
ತಮ್ಮ ಸೇವಾವಧಿಯಲ್ಲಿ ರೋಗಿಗಳ ಮೇಲಿನ ಅಪಾರ ಕಾಳಜಿ, ವೃತ್ತಿಪರ ಕರ್ತವ್ಯನಿಷ್ಠೆ ಹಾಗೂ ಮಾನವೀಯ ನಡವಳಿಕೆಯಿಂದ ಡಾ. ರಾಘವೇಂದ್ರ ಅವರು ಆಸ್ಪತ್ರೆ ಸಿಬ್ಬಂದಿ ಮತ್ತು ತಾಲೂಕಿನ ಸಾರ್ವಜನಿಕರ ಅಪಾರ ಮೆಚ್ಚುಗೆಗೆ ಪಾತ್ರರಾಗಿದ್ದರು. ಕಳೆದ ಒಂದು ವರ್ಷದಲ್ಲಿ ಹಲವು ಸಂಕೀರ್ಣ ಶಸ್ತ್ರಚಿಕಿತ್ಸೆಗಳನ್ನು ಯಶಸ್ವಿಯಾಗಿ ನೆರವೇರಿಸುವ ಮೂಲಕ ಬಡ ರೋಗಿಗಳಿಗೆ ನೆರವಾಗಿದ್ದ ಅವರು, ಸಾರ್ವಜನಿಕರ ಹಿತೈಷಿಯಾಗಿ ಸೇವೆ ಸಲ್ಲಿಸಿದ್ದರು.
ಅವರ ಈ ಅಮೂಲ್ಯ ಸೇವೆ ಮತ್ತು ಮಾನವೀಯ ಗುಣಗಳನ್ನು ಬೆಳ್ತಂಗಡಿಯ ಸಾರ್ವಜನಿಕರು ಹಾಗೂ ಆಸ್ಪತ್ರೆ ಸಿಬ್ಬಂದಿ ಕೃತಜ್ಞತೆಯಿಂದ ಸ್ಮರಿಸಿದ್ದಾರೆ.
- Advertisement -


