Friday, June 5, 2026
Homeಕರಾವಳಿಬೆಳ್ತಂಗಡಿ: ಏ.17 ರಂದು ನಾಮಪತ್ರ ಸಲ್ಲಿಸಲಿರುವ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಏ.17 ರಂದು ನಾಮಪತ್ರ ಸಲ್ಲಿಸಲಿರುವ ಶಾಸಕ ಹರೀಶ್ ಪೂಂಜ

- Advertisement -
- Advertisement -

ಬೆಳ್ತಂಗಡಿ: ತಮ್ಮ ಅಭಿವೃದ್ಧಿಯ ಕೆಲಸದ ಮೂಲಕ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರವನ್ನು ಬಿಜೆಪಿಯ  ಭದ್ರಕೋಟೆಯನ್ನಾಗಿಸಿರುವ ಶಾಸಕ ಹರೀಶ್ ಪೂಂಜ, ಈ ಬಾರಿಯ ವಿಧಾನಸಭಾ ಚುನಾವಣೆಗೆ ಬಿಜೆಪಿಯ ಅಭ್ಯರ್ಥಿಯಾಗಿ ಏಪ್ರಿಲ್ 17 ರಂದು ನಾಮಪತ್ರ ಸಲ್ಲಿಸಲಿದ್ದಾರೆ.

ಏಪ್ರಿಲ್ 17 ರಂದು ಸೋಮವಾರ ಬೆಳಗ್ಗೆ 10 ಗಂಟೆಗೆ ಬೆಳ್ತಂಗಡಿಯ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ನಂತರ ಬೃಹತ್ ಮೆರವಣಿಗೆಯ ಮೂಲಕ ತಾಲೂಕು ಆಡಳಿತ ಸೌಧಕ್ಕೆ ತೆರಳಿ ತಮ್ಮ ನಾಮಪತ್ರವನ್ನು ಸಲ್ಲಿಸಲಿದ್ದಾರೆ.

ಈಗಾಗಲೇ ತಾಲೂಕಿನ ಪ್ರತಿ ಶಕ್ತಿಕೇಂದ್ರಕ್ಕೆ ತೆರಳಿ ಮೊದಲ ಹಂತದ ಚುನಾವಣಾ ಪೂರ್ವ ತಯಾರಿ ಸಭೆ ನಡೆಸಿರುವ ಹರೀಶ್ ಪೂಂಜ, ಕಾರ್ಯಕರ್ತರಲ್ಲಿ ಮತ್ತು ಪಕ್ಷದ ಹಿತೈಷಿಗಳಲ್ಲಿ ಚುನಾವಣೆಯ ಹೊಸ ಹುರುಪನ್ನು ಹುಟ್ಟುಹಾಕಿದ್ದಾರೆ. ನಾಮಪತ್ರ ಸಲ್ಲಿಕೆಗೆ  ಬೆಳ್ತಂಗಡಿ ತಾಲೂಕಿನ ಪ್ರತಿ ಗ್ರಾಮದಿಂದಲೂ ಸಾವಿರಾರೂ ಕಾರ್ಯಕರ್ತರು ಆಗಮಿಸುವ ನಿರೀಕ್ಷೆ ಇದೆ ಎಂದು ಪಕ್ಷದ ಪ್ರಮುಖರು ತಿಳಿಸಿದ್ದಾರೆ.

- Advertisement -

Latest News

error: Content is protected !!