Monday, June 15, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಕೀರ್ತಿ ಹೆಚ್ ಬಿ ನಿಧನ

ಬೆಳ್ತಂಗಡಿ : ಪಂಚಾಯತ್ ಅಭಿವೃದ್ಧಿ ಅಧಿಕಾರಿ ಜಯಕೀರ್ತಿ ಹೆಚ್ ಬಿ ನಿಧನ

- Advertisement -
- Advertisement -

ಬೆಳ್ತಂಗಡಿ : ಬಾರ್ಯ ಮತ್ತು ತೆಕ್ಕಾರು ಗ್ರಾಮ ಪಂಚಾಯತ್ ಪ್ರಭಾರ ಅಭಿವೃದ್ಧಿ ಅಧಿಕಾರಿ, ಚಾರ್ಮಾಡಿ ಗ್ರಾಮ ಪಂಚಾಯತ್ ಗ್ರೇಡ್ -1 ಕಾರ್ಯದರ್ಶಿಯಾಗಿದ್ದ ಜಯಕೀರ್ತಿ(47) ಹೆಚ್ ಬಿ.  ಅಲ್ಪಕಾಲದ ಅಸೌಖ್ಯದಿಂದ ಜೂ.15 ರಂದು  ಮೃತಪಟ್ಟಿದ್ದಾರೆ.

ಮೂಲತಃ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಹಳೆಬೀಡು ನಿವಾಸಿಯಾಗಿರುವ ಜಯಕೀರ್ತಿ ಬೆಳ್ತಂಗಡಿ ತಾಲೂಕಿನಲ್ಲಿ ಹಲವು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ಮಾಜಿ ದಿ.ವಸಂತ ಬಂಗೇರರ ಆಪ್ತ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದರು.ಕೆಲ ದಿನಗಳ ಹಿಂದೆ ಅನಾರೋಗ್ಯವೆಂದು ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಮೃತರು ಪತ್ನಿ ಹಾಗೂ ಮಕ್ಕಳನ್ನು ಅಗಲಿದ್ದಾರೆ. ನಿನ್ನೆಯಷ್ಟೇ ಜಯಕೀರ್ತಿ ಅವರು ತಮ್ಮ 47ನೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು ಎನ್ನಲಾಗಿದೆ.

- Advertisement -

Latest News

error: Content is protected !!