Thursday, June 4, 2026
Homeಕರಾವಳಿಬೆಳ್ತಂಗಡಿ: ತಲೆ ಮರೆಸಿಕೊಂಡಿರುವ ಪೋಕ್ಸೋ ಪ್ರಕರಣದ ಆರೋಪಿಯ ಪತ್ತೆಗೆ ಮನವಿ

ಬೆಳ್ತಂಗಡಿ: ತಲೆ ಮರೆಸಿಕೊಂಡಿರುವ ಪೋಕ್ಸೋ ಪ್ರಕರಣದ ಆರೋಪಿಯ ಪತ್ತೆಗೆ ಮನವಿ

- Advertisement -
- Advertisement -

ಬೆಳ್ತಂಗಡಿ:  ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಪೊಲೀಸರು ಮನವಿ ಮಾಡಿದ್ದಾರೆ.

 ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮದ ಉಳ್ತೂರು ಮನೆ ನಿವಾಸಿ ಮಹಮ್ಮದ್‌ ಅವರ ಪುತ್ರ ಆಸಿಮ್‌ (29) ವಿರುದ್ಧ 2015ರಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು.ಆದರೆ ಆರೋಪಿ  ತಲೆಮರೆಸಿಕೊಂಡಿದ್ದು, ಈತನ ಪತ್ತೆಗಾಗಿ ಪೊಲೀಸ್‌ ಇಲಾಖೆ ಸಾರ್ವಜನಿಕ ಪ್ರಕಟನೆ ಹೊರಡಿಸಿದೆ.

ಪೋಕ್ಸೋ ಪ್ರಕರಣದಲ್ಲಿ ಈತ ಮಂಗಳೂರು ಜಿಲ್ಲಾ ಜೈಲಿನಲ್ಲಿದ್ದು, ಇದೇ ವೇಳೆ ಜೈಲಿನಲ್ಲಿ ನಡೆದ ಕೊಲೆ ಪ್ರಕರಣವೊಂದರಲ್ಲಿ ಭಾಗಿಯಾಗಿ ಅಲ್ಲಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ.ಆತನ ವಿರುದ್ಧ ಮಂಗಳೂರು ಪೋಕ್ಸೋ ನ್ಯಾಯಾಲಯ ಪತ್ತೆಯ ಬಗ್ಗೆ ಉದ್ಘೋಷಣೆ ಹೊರಡಿಸಿದೆ

.

ಆರೋಪಿ ಆಸಿಮ್‌ನ ಕುರಿತು ಸುಳಿವು ಸಿಕ್ಕಲ್ಲಿ ವೇಣೂರು ಪೊಲೀಸ್‌ ಠಾಣೆ ಉಪನಿರೀಕ್ಷಕರ ದೂರವಾಣಿ 9480805372 ಅಥವಾ ಠಾಣೆ ಸಂಖ್ಯೆ 08256-286232 ಸಂಪರ್ಕಿಸುವಂತೆ ಕೋರಲಾಗಿದೆ.

- Advertisement -

Latest News

error: Content is protected !!