Wednesday, May 15, 2024
Homeಕರಾವಳಿಬೆಳ್ತಂಗಡಿ : 9 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅಂದರ್

ಬೆಳ್ತಂಗಡಿ : 9 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅಂದರ್

spot_img
- Advertisement -
- Advertisement -

ಬೆಳ್ತಂಗಡಿ : ಧರ್ಮಸ್ಥಳ ಠಾಣೆಗೆ ಮತ್ತು ಬೆಳ್ತಂಗಡಿ ಪೊಲೀಸ್ ಠಾಣೆಯ ಎರಡು ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು ಒಂಭತ್ತು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿದ್ದ ಆರೋಪಿಯನ್ನು ಧರ್ಮಸ್ಥಳ ಮತ್ತು ಬೆಳ್ತಂಗಡಿ ಪೊಲೀಸರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಬಂಧಿಸಿ ಜೈಲಿಗಟ್ಟಿದ್ದಾರೆ.

2013 ರಲ್ಲಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದ ಸಂಬಂಧ ಬೆಳ್ತಂಗಡಿ ಪೊಲೀಸರು ಬಂಧಿಸಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಮೆಡಿಕಲ್ ಮಾಡಿಸಲು ಕರೆತಂದಾಗ ಪೊಲೀಸರ ಕೈಯಿಂದ ತಪ್ಪಿಸಿಕೊಂಡ ಪ್ರಕರಣ ಮತ್ತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ವರದಕ್ಷಿಣೆ ಪ್ರಕರಣ ಸಂಬಂಧ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗಿದೆ ತಲೆಮರೆಸಿಕೊಂಡಿದ್ದ ಆರೋಪಿ ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಕನ್ಯಾಡಿ ಹಡಿಲು ನಿವಾಸಿ ಚನ್ನಪ್ಪ ಎಂಬವರ ಮಗನಾದ ಸತೀಶ್ (38) ಎಂಬಾತನನ್ನು ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಹೋನವಳ್ಳಿ ಕೊಪ್ಪಲ್ಲು ಎಂಬಲ್ಲಿಂದ ಕೂಲಿ ಕೆಲಸ ಮಾಡಿಕೊಂಡಿದ್ದ ಬಗ್ಗೆ ಖಚಿತ ಮಾಹಿತಿ ಪಡೆದು ಫೆ.14 ರಂದು ಧರ್ಮಸ್ಥಳ ಠಾಣೆಯ ಸಬ್ ಇನ್ಸ್ಪೆಕ್ಟರ್ ಅನಿಲ್‌ ಕುಮಾರ್.ಡಿ ಮತ್ತು ಬೆಳ್ತಂಗಡಿ ಠಾಣೆಯ ಸಬ್ ಇನ್ಸ್ಪೆಕ್ಟರ್ ಅರ್ಜುನ್ ನೇತೃತ್ವದ ಸಿಬ್ಬಂದಿ ರಾಜೇಶ್, ಬೆಳ್ತಂಗಡಿ ಠಾಣಾ ಸಿಬ್ಬಂದಿ ವೃಷಭ , ಬಸವರಾಜ್ ರವರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಬಂಧಿಸಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.ಪೊಲೀಸರ ಕೈಯಿಂದ ಪರಾರಿಯಾಗಿದ್ದ ಆರೋಪಿ : 2013 ರಲ್ಲಿ ಪೋಕ್ಸೋ ಪ್ರಕರಣದಲ್ಲಿ ಆರೋಪಿಯಾಗಿದ್ದ ಸತೀಶ್ ನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿ ನಂತರ ಮೆಡಿಕಲ್ ಟೆಸ್ಟಿಗೆ ಪೊಲೀಸ್ ಭದ್ರತೆಯಲ್ಲಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಕರೆ ತಂದಿದ್ದಾಗ ಪೊಲೀಸರಿಂದ ತಪ್ಪಿಸಿಕೊಂಡಿದ್ದು ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಸ್ಟಡಿ ಪರಾರಿ ಪ್ರಕರಣ ದಾಖಲಾಗಿತ್ತು . ನಾಲ್ಕು ದಿನದ ಬಳಿಕ ಉಜಿರೆ ಬಳಿ ಪೊಲೀಸರ ಕೈಗೆ ಸಿಕ್ಕಿಬಿದ್ದು ಜೈಲು ಪಾಲಾಗಿದ್ದ ಬಳಿಕ ಜಾಮೀನು ಪಡೆದುಕೊಂಡು ಹೊರಬಂದಿದ್ದ. ನಂತರ ನ್ಯಾಯಾಲಯದಲ್ಲಿ ಪೋಕ್ಸೋ ಪ್ರಕರಣ ಖುಲಾಸೆಯಾಗಿದ್ದು. ವರದಕ್ಷಿಣೆ ಪ್ರಕರಣ ಮತ್ತು ಕಸ್ಟಡಿಯಿಂದ ಪರಾರಿಯಾಗಿದ್ದ ಪ್ರಕರಣ ನ್ಯಾಯಾಲಯದಲ್ಲಿ ತನಿಖೆಯಲ್ಲಿದೆ

- Advertisement -
spot_img

Latest News

error: Content is protected !!