
ಬೆಳ್ತಂಗಡಿ:ದಿನಾಂಕ 11.11.2026 ರಂದು ಪೂರ್ವಾಹ್ನ 11 ಗಂಟೆಗೆ ಸರಿಯಾಗಿ ತಾಲೂಕು ಪಂಚಾಯತ್ ಬೆಳ್ತಂಗಡಿಯ ಸಭಾಂಗಣದಲ್ಲಿ ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶ್ರೀ ರಕ್ಷಿತ್ ಶಿವರಾಂ ಇವರು ಗೃಹಲಕ್ಷ್ಮೀ ಯೋಜನೆಯ ಅರ್ಜಿಗಳ ಮರು ಪರಿಶೀಲನೆಗಾಗಿ ಗಣತಿದಾರ ರಾದ ಅಂಗನವಾಡಿ ಕಾರ್ಯಕರ್ತೆಯರಿಗೆ ಹಮ್ಮಿಕೊಳ್ಳಲಾದ ತರಬೇತಿ ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.
ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಾದ ಶ್ರೀ ಭವಾನಿ ಶಂಕರ್ ವಹಿಸಿದ್ದರು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಶ್ರೀ ರಕ್ಷಿತ್ ಶಿವರಾಂ ರವರು ಗೃಹಲಕ್ಷ್ಮೀ ಮರು ಪರಿಶೀಲನೆಯ ಕಾರ್ಯವನ್ನು ಉತ್ತಮವಾಗಿ ನಡೆಸಲು ತಿಳಿಸುತ್ತಾ, ಗ್ಯಾರಂಟಿ ಸಮಿತಿ ವತಿಯಿಂದ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಭರವಸೆ ಇತ್ತರು.ಮಾನ್ಯ ಕಾರ್ಯ ನಿರ್ವಹಣಾಧಿಕಾರಿಗಳು ಮಾತನಾಡಿ ಗೃಹಲಕ್ಷ್ಮೀ ಯೋಜನೆಯ ಮರುಪರಿಶೀಲನೆಯ ಉದ್ದೇಶವನ್ನು ಸಭೆಗೆ ತಿಳಿಸಿದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಶ್ರೀಮತಿ ಪ್ರಿಯ ಆಗ್ನೆಸ್ ರವರು ಗೃಹಲಕ್ಷ್ಮೀ ಯೋಜನೆಯ ಮರು ಪರಿಶೀಲನೆ ಗಣತಿಯ ರೂಪು ರೇಷೆಗಳ ಬಗ್ಗೆ ತಿಳಿಸುತ್ತಾ ತರಬೇತಿಯನ್ನು ಪಡೆದು ನಿಗದಿತ ಅವಧಿಯೊಳಗೆ ಮರು ಪರಿಶೀಲನೆ ಕಾರ್ಯವನ್ನು ಪೂರ್ಣಗೊಳಿಸುವಂತೆ ಸೂಚಿಸಿದರು.ತರಬೇತಿ ಕಾರ್ಯಕ್ರಮದಲ್ಲಿ ನೂತನ ತಾಲೂಕು ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿಯ ಎಲ್ಲಾ ಸದಸ್ಯರು, ತರಬೇತುದಾರರಾದ ವಾಣಿ ಶ್ರೀ ಹಾಗೂ ಕಾತ್ಯಾಯಿನಿ, ಇಲಾಖೆಯ ಸಿಬ್ಬಂದಿಗಳು ಮತ್ತು ಗಣತಿದಾರರಾದ ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದರು.ಕಾರ್ಯಕ್ರಮವನ್ನು ಕಾತ್ಯಾಯಿನಿ ನಿರೂಪಿಸಿ ಸ್ವಾಗತಿಸಿದರು. ವಾಣಿಶ್ರೀ ವಂದಿಸಿದರು


