Thursday, June 4, 2026
Homeಕರಾವಳಿಬೆಳ್ತಂಗಡಿಯಲ್ಲಿ ಡೆಂಗ್ಯೂ ಜ್ವರಕ್ಕೆ ಎರಡನೇ ಬಲಿ.. ಕನ್ಯಾಡಿ ಗ್ರಾಮದ ಸಂಜೀವ ಗೌಡ ನಿಧನ

ಬೆಳ್ತಂಗಡಿಯಲ್ಲಿ ಡೆಂಗ್ಯೂ ಜ್ವರಕ್ಕೆ ಎರಡನೇ ಬಲಿ.. ಕನ್ಯಾಡಿ ಗ್ರಾಮದ ಸಂಜೀವ ಗೌಡ ನಿಧನ

- Advertisement -
- Advertisement -

ಬೆಳ್ತಂಗಡಿ: ಶಂಕಿತ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ತಾಲೂಕಿನ ವ್ಯಕ್ತಿಯೋರ್ವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ ಎನ್ನಲಾಗಿದೆ.

ಕನ್ಯಾಡಿ ಗ್ರಾಮದ ಕೇಳ್ತಾಜೆ ನಿವಾಸಿ ಸಂಜೀವ ಗೌಡ(48) ಶಂಕಿತ ಡೆಂಗ್ಯೂ ಜ್ವರದಿಂದ ಮೃತ ದುರ್ದೈವಿ.

ಜ್ವರದಿಂದ ಬಳಲುತ್ತಿದ್ದ ಇವರು, ಸ್ಥಳೀಯ ಖಾಸಗಿ ವೈದ್ಯರಲ್ಲಿಗೆ ಜೂ.23ರಂದು ಚಿಕಿತ್ಸೆಗೆ ಹೋದಾಗ ಆ ವೈದ್ಯರು ಮಂಗಳೂರಿಗೆ ಕಳುಹಿಸಿದ್ದರು. ಆದರೆ, ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾದ್ದಾರೆ.

ಕನ್ಯಾಡಿ ಗ್ರಾಮದ ಕೇಳ್ತಾಜೆ, ನಾವೂರು ಹಾಗೂ ಇಂದಬೆಟ್ಟು ಗ್ರಾಮದಲ್ಲಿ ಡೆಂಗ್ಯೂ ಜ್ವರದಿಂದ ಆನೇಕ ಮಂದಿ ಬಳಲುತ್ತಿದ್ದು, ಆರೋಗ್ಯ ಇಲಾಖೆ ಇದರ ಬಗ್ಗೆ ಹೆಚ್ಚಿನ ಗಮನ ಹರಿಸುವಂತೆ ನಾಗರಿಕರು ಆಗ್ರಹಿಸಿದ್ದಾರೆ.

- Advertisement -

Latest News

error: Content is protected !!