Tuesday, July 14, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಉಜಿರೆಯಲ್ಲಿ ಕುಳಿತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಬೆಳ್ತಂಗಡಿ : ಉಜಿರೆಯಲ್ಲಿ ಕುಳಿತ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

- Advertisement -
- Advertisement -

ಬೆಳ್ತಂಗಡಿ : ವ್ಯಕ್ತಿಯೊಬ್ಬರ ಮೃತದೇಹ ಉಜಿರೆ- ಚಾರ್ಮಾಡಿ ರಸ್ತೆಯ ಬ್ಯಾಂಕ್ ಕಟ್ಟಡದ ಬದಿಯಲ್ಲಿ ಕುಳಿತ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ.

ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಚಾರ್ಮಾಡಿ ರಸ್ತೆಯಲ್ಲಿರುವ ಬ್ಯಾಂಕ್ ಆಫ್ ಬರೋಡ ಬ್ಯಾಂಕ್ ಕಟ್ಟಡದ ಬದಿಯಲ್ಲಿ ಫೆ.7 ರಂದು ಬೆಳಗ್ಗೆ 11 ಗಂಟೆಗೆ ಸುಮಾರಿಗೆ ಕುಳಿತ ಸ್ಥಿತಿಯಲ್ಲಿ ಬೆಳ್ತಂಗಡಿ ತಾಲೂಕಿನ ನಡ ಗ್ರಾಮದ ಸುರ್ಯ ಬರಮೇಲು ನಿವಾಸಿ ದೇವರಾಜ್(50) ಎಂಬವರ ಮೃತದೇಹ ಪತ್ತೆಯಾಗಿದೆ.

ಬ್ಯಾಂಕ್ ಸಿಬ್ಬಂದಿ ಕಟ್ಟಡದ ಬದಿಯಲ್ಲಿ ಹೋಗುವಾಗ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!