Wednesday, June 24, 2026
Homeಕರಾವಳಿಮಂಗಳೂರುಬೆಳ್ತಂಗಡಿ : ಈಜಲು ಹೋದ ಯುವಕ ನೀರಲ್ಲಿ ಮುಳುಗಿ ಸಾವು

ಬೆಳ್ತಂಗಡಿ : ಈಜಲು ಹೋದ ಯುವಕ ನೀರಲ್ಲಿ ಮುಳುಗಿ ಸಾವು

- Advertisement -
- Advertisement -

ಬೆಳ್ತಂಗಡಿ : ನೀರಲ್ಲಿ ಈಜಲು ಹೋದ ಯುವಕನೊಬ್ಬ ಅಕಸ್ಮಿಕವಾಗಿ ನೀರಿನ ಸೆಳೆತಕ್ಕೆ ಸಿಕ್ಕಿ ಸಾವನ್ನಪ್ಪಿದ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಸುಣ್ಣತ್ ಕೆರೆ ನಿವಾಸಿ ಇರ್ಫಾನ್(19) ಮೃತ ಯುವಕ.

ಬೆಳ್ತಂಗಡಿ ತಾಲೂಕಿನ ಕರಂಬಾರು ಗ್ರಾಮದ ಕೇಳ್ಕರ ಮಹಾಲಿಂಗೇಶ್ವರ ದೇವಸ್ಥಾನದ ಬಳಿಯ ನದಿಗೆ ಇರ್ಫಾನ್ ಮಾ.21 ರಂದು ಸಂಜೆ 4 ಗಂಟೆಗೆ ಈಜಲು ಹೋದಾಗ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.

ನೀರಲ್ಲಿ ಮುಳುಗಿ ಕೆಲವೇ ಕ್ಷಣದಲ್ಲಿ ಸ್ಥಳೀಯ ಯುವಕರು ರಕ್ಷಣೆಗೆ ಧಾವಿಸಿ ಉಜಿರೆ ಖಾಸಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ವೇಣೂರು ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!