Thursday, July 16, 2026
Homeಕರಾವಳಿಮಂಗಳೂರುಬೆಳ್ತಂಗಡಿ : ದ್ವಿಚಕ್ರ ವಾಹನ - ಇನೋವಾ ಕಾರು ನಡುವೆ ಅಪಘಾತ; ದ್ವಿಚಕ್ರ ವಾಹನ ಸವಾರನಿಗೆ...

ಬೆಳ್ತಂಗಡಿ : ದ್ವಿಚಕ್ರ ವಾಹನ – ಇನೋವಾ ಕಾರು ನಡುವೆ ಅಪಘಾತ; ದ್ವಿಚಕ್ರ ವಾಹನ ಸವಾರನಿಗೆ ಗಂಭೀರ ಗಾಯ

- Advertisement -
- Advertisement -

ಬೆಳ್ತಂಗಡಿ : ಮುದ್ದಿಗೆ ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಅಡುಗೆ ಕೆಲಸಕ್ಕೆ ಹೋಗುತ್ತಿದ್ದ ದ್ವಿಚಕ್ರ ವಾಹನ ಮತ್ತು ಇನೋವಾ ಕಾರು ನಡುವೆ ಅಪಘಾತ ಸಂಭವಿಸಿದ ಪರಿಣಾಮ ದ್ವಿಚಕ್ರ ಸವಾರನ ಕಾಲಿಗೆ ಗಂಭೀರ ಗಾಯವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ಬೊಳಿಯಾರ್ ನಲ್ಲಿ ಏ.11 ರಂದು ಬೆಳಗ್ಗೆ 6:30 ರ ಸುಮಾರಿಗೆ ಇನೋವಾ ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತವಾಗಿ ದ್ವಿಚಕ್ರ ವಾಹನ ಸವಾರ ಧರ್ಮಸ್ಥಳ ಗ್ರಾಮದ ದೊಂಡೊಲೆ ನಿವಾಸಿ ಅಶೋಕ್ ಭಟ್(65) ಎಂಬವರ ಕಾಲಿಗೆ ಗಂಭೀರ ಗಾಯವಾಗಿದ್ದು ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!