Wednesday, June 24, 2026
Homeಕರಾವಳಿಮಂಗಳೂರುಬೆಳ್ತಂಗಡಿ : 36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅಂದರ್

ಬೆಳ್ತಂಗಡಿ : 36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಅಂದರ್

- Advertisement -
- Advertisement -

ಬೆಳ್ತಂಗಡಿ : ಹಲ್ಲೆ ಪ್ರಕರಣ ಸಂಬಂಧ 36 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಬೊಮ್ಮಣ್ಣ ಮಗನಾದ ರವೀಂದ್ರ (56) ಬಂಧಿತ ಆರೋಪಿ.

ಘಟನೆಯ ವಿವರ: ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಚಾರ್ಮಾಡಿ ಗೇಟ್ ಬಳಿ ಮೋಹನ್ ಎಂಬಾತನಿಗೆ 1989 ಇಸವಿಯಲ್ಲಿ ಆರೋಪಿಗಳಾದ ಕೊರಗಪ್ಪ ಗೌಡ ಮತ್ತು ರವೀಂದ್ರ ಸೇರಿ ಹಲ್ಲೆ ಮಾಡಿದ್ದರು. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 68/1989 ರಂತೆ ಕಲಂ 341,323,326 ಜೊತೆಗೆ 34 ಐಪಿಸಿ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಆರೋಪಿ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಬೊಮ್ಮಣ್ಣ ಮಗನಾದ ರವೀಂದ್ರ(56)ಎಂಬಾತ ಪೊಲೀಸರಿಗೆ ಹಾಗೂ ನ್ಯಾಯಾಲಯಕ್ಕೆ ಹಾಜರಾಗದೆ ಸಿಗದೆ ತಲೆಮರೆಸಿಕೊಂಡಿದ್ದನು.

ಆರೋಪಿಗಾಗಿ ಹುಡುಕಾಟ: ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ನ್ಯಾಯಾಲಯದಿಂದ ಆರೋಪಿ ಪತ್ತೆಗಾಗಿ ಎಲ್.ಪಿ.ಸಿ 04/1992 ರಂತೆ ವಾರಂಟ್ ಜಾರಿ ಮಾಡಿದ್ದರು. ಈ ಪ್ರಕರಣದ ಆರೋಪಿ ರವೀಂದ್ರನ ಪತ್ತೆಗಾಗಿ ಧರ್ಮಸ್ಥಳ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಸಮರ್ಥ್ ಆರ್ ಗಾಣಿಗೇರ ತಂಡದ ಸಿಬ್ಬಂದಿ ಆರೋಪಿಗಾಗಿ ಬಗ್ಗೆ ವಿವಿಧ ಕಡೆ ಹುಡುಕಾಟ ನಡೆಸುತ್ತಿದ್ದರು.

ಆರೋಪಿ ಬಂಧನ: ಆರೋಪಿ ರವೀಂದ್ರನ ಪತ್ತೆಗೆ ಬೇರೆ ಬೇರೆ ಕಡೆ ಖಚಿತ ಮಾಹಿತಿ ಕಳೆ ಹಾಕಿದಾಗ ಜ.6 ರಂದು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಲ್ಲೂರು ಎಂಬಲ್ಲಿರೋದು ಗೊತ್ತಾಗಿದೆ. ಅದರಂತೆ ಆತನನ್ನು ಅಲ್ಲಿ ಬಂಧಿಸಿ ಬಂಟ್ವಾಳ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು. ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ತಲೆಮರೆಸಿಕೊಂಡು ಜೀವನ: ಹಲ್ಲೆ ಪ್ರಕರಣ ದಾಖಲಾದ ಬಳಿಕ ಪೊಲೀಸರಿಗೆ ಕೈಗೆ ಸಿಗದೆ ತಲೆಮರೆಸಿಕೊಂಡು ರವೀಂದ್ರ 12 ವರ್ಷಗಳ ಕಾಲ ಪುಣೆಯಲ್ಲಿ ಕೆಲಸ ಮಾಡುತ್ತಿದ್ದ ಬಳಿಕ ಬೆಳಗಾವಿಯಲ್ಲಿ 5 ವರ್ಷ ಕೆಲಸ ಮಾಡಿದ್ದಾನೆ.ಬಳಿಕ ಯುವತಿಯೊಬ್ಬಳ ಜೊತೆ ಮದುವೆಯಾಗಿ ಒಂದು ಗಂಡು ಮತ್ತು ಒಂದು ಹೆಣ್ಣು ಮಗುವನ್ನು ಕರುಣಿಸಿದ್ದ. ಮಗಳಿಗೆ ಮದುವೆಯಾಗಿದ್ದು ಮಗ ಬೆಂಗಳೂರಿನಲ್ಲಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದಾನೆ. ಪತ್ನಿ ಅನಾರೋಗ್ಯದಿಂದ ಸಾವನ್ನಪ್ಪಿದ ಬಳಿಕ ರವೀಂದ್ರ ಕೊನೆಗೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಲ್ಲೂರಿಗೆ ಬಂದು ಮನೆ ಕಟ್ಟಿ ಡಿ.5 ಕ್ಕೆ ಗೃಹಪ್ರವೇಶ ಮಾಡಿ ವಾಸವಾಗಿದ್ದ ಎನ್ನಲಾಗಿದೆ.

ಕಾರ್ಯಾಚರಣೆ: ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ಸಿ.ಕೆ.ರೋಹಿಣಿ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕರಾದ ರವಿ.ಬಿ.ಎಸ್ ನೇತೃತ್ವದಲ್ಲಿ ಧರ್ಮಸ್ಥಳ ಸಬ್ ಇನ್ಸ್‌ಪೆಕ್ಟರ್ ಸಮರ್ಥ್ ಆರ್ ಗಾಣಿಗೇರ ತಂಡದ ಸಿಬ್ಬಂದಿ ವೃಷಭ, ಚರಣ್ ರಾಜ್, ಯೋಗರಾಜ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದರು.ದೂರುದಾರನ ಪರ ಬೆಳ್ತಂಗಡಿ ವಕೀಲರಾದ ಉಷಾ ಎನ್.ಕೆ ವಕಾಲತ್ತು ಮಾಡಿದ್ದರು.

- Advertisement -

Latest News

error: Content is protected !!